Leviticus 16:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ಆರೋನನು ಪಾಪಪರಿಹಾರಕ ಯಜ್ಞಕ್ಕೋಸ್ಕರ ಹೋರಿಯನ್ನು ಅರ್ಪಿಸಬೇಕು. ಈ ಪಾಪಪರಿಹಾರಕ ಯಜ್ಞವು ಅವನಿಗಾಗಿ ಇರುತ್ತದೆ. ಆರೋನನು ತನಗೂ ತನ್ನ ಕುಟುಂಬದವರಿಗೂ ಪ್ರಾಯಶ್ಚಿತ್ತ ಮಾಡಲು ಇದನ್ನು ಮಾಡಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆರೋನನು ತನಗಾಗಿಯೂ ಮತ್ತು ತನ್ನ ಮನೆತನದವರಿಗಾಗಿಯೂ ದೋಷಪರಿಹಾರ ಮಾಡಬೇಕು.
Kannada BSI Bible 2016
ಇದಲ್ಲದೆ ಆರೋನನು ತನಗೋಸ್ಕರ ಪಾಪಬಲಿ ಗಾಗಿ ತನ್ನ ಹೋರಿಯನ್ನು ಸಮರ್ಪಿಸಿ ತನ್ನ ಮನೆಯ ವರಿಗೋಸ್ಕರವೂ ಪ್ರಾಯಶ್ಚಿತ್ತಮಾಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆರೋನನು ತನಗೋಸ್ಕರವಾಗಿ ತಂದ ಹೋರಿಯನ್ನು ಸಮರ್ಪಿಸಿ ತನಗೋಸ್ಕರವೂ ತನ್ನ ಮನೆತನದವರಿಗೋಸ್ಕರವೂ ದೋಷಪರಿಹಾರ ಮಾಡಬೇಕು.
Kannada Bible (KNCL) BSI 2016
ಆರೋನನು ತನಗಾಗಿ ತಂದ ಹೋರಿಯನ್ನು ಸಮರ್ಪಿಸಿ ತನ್ನ ಹಾಗು ತನ್ನ ಮನೆತನದವರ ಪರವಾಗಿ ಪಶ್ಚಾತ್ತಾಪ ವಿಧಿಯನ್ನು ನೆರವೇರಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಇದಲ್ಲದೆ ಆರೋನನು ತನಗೋಸ್ಕರ ಪಾಪ ಪರಿಹಾರದ ಬಲಿಗಾಗಿ ತನ್ನ ಹೋರಿಯನ್ನು ಸಮರ್ಪಿಸಿ, ತನ್ನ ಮನೆಯವರಿಗೋಸ್ಕರವೂ ಪ್ರಾಯಶ್ಚಿತ್ತ ಮಾಡಬೇಕು.