Leviticus 17:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾಕೆಂದರೆ ದೇಹದ ಜೀವ ರಕ್ತದಲ್ಲಿದೆ. ನೀವು ನಿಮಗೋಸ್ಕರವಾಗಿ ಯಜ್ಞವೇದಿಕೆಯ ಮೇಲೆ ಪ್ರಾಯಶ್ಚಿತ್ತ ಮಾಡಲಿ ಎಂದು ನಾನು ಅದನ್ನು ನಿಮಗೆ ಕೊಟ್ಟಿದ್ದೇನೆ. ನೀವು ನಿಮಗೋಸ್ಕರವಾಗಿ ಪ್ರಾಯಶ್ಚಿತ್ತ ಮಾಡಲು ಈ ನಿಯಮಗಳನ್ನು ಉಪಯೋಗಿಸಬೇಕು. ಒಬ್ಬನ ಜೀವಕ್ಕೆ ರಕ್ತವೇ ಪ್ರಾಯಶ್ಚಿತ್ತವಾಗಿದೆ. ಜೀವಿಯೊಂದನ್ನು ಕೊಂದಿದ್ದರ ಬೆಲೆಯಾಗಿ ನೀವು ನನಗೆ ಆ ರಕ್ತವನ್ನು ಕೊಡಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಕೆಂದರೆ ಪ್ರತಿದೇಹಿಗೂ ರಕ್ತವೇ ಪ್ರಾಣಾಧಾರ. ಅಂತಹ ರಕ್ತವನ್ನು ನೀವು ಯಜ್ಞವೇದಿಗೆ ಎರಚಿ ನಿಮಗೋಸ್ಕರ ದೋಷಪರಿಹಾರ ಮಾಡಿಕೊಳ್ಳಬೇಕೆಂದು ನಿಮಗೆ ಅನುಗ್ರಹ ಮಾಡಿದ್ದೇನೆ. ರಕ್ತವು ಪ್ರಾಣಾಧಾರವಾಗಿರುವ ಕಾರಣ ಅದರಿಂದ ದೋಷಪರಿಹಾರ ಆಗುತ್ತದಷ್ಟೆ.
Kannada BSI Bible 2016
ಯಾಕಂದರೆ ಪ್ರತಿ ದೇಹಿಗೂ ರಕ್ತವೇ ಪ್ರಾಣಾಧಾರ. ಅಂಥ ರಕ್ತವನ್ನು ನೀವು ಯಜ್ಞವೇದಿಗೆ ಎರಚಿ ನಿಮ ಗೋಸ್ಕರ ದೋಷಪರಿಹಾರ ಮಾಡಿಕೊಳ್ಳಬೇಕೆಂದು ನಿಮಗೆ ಅನುಗ್ರಹ ಮಾಡಿದ್ದೇನೆ. ರಕ್ತವು ಪ್ರಾಣಾಧಾರ ವಾಗಿರುವ ಕಾರಣ ಅದರಿಂದ ದೋಷಪರಿಹಾರ ವಾಗುತ್ತದಷ್ಟೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕಂದರೆ ಪ್ರತಿದೇಹಿಗೂ ರಕ್ತವೇ ಪ್ರಾಣಾಧಾರ. ಅಂಥ ರಕ್ತವನ್ನು ನೀವು ಯಜ್ಞವೇದಿಗೆ ಎರಚಿ ನಿಮಗೋಸ್ಕರ ದೋಷಪರಿಹಾರ ಮಾಡಿಕೊಳ್ಳಬೇಕೆಂದು ನಿಮಗೆ ಅನುಗ್ರಹ ಮಾಡಿದ್ದೇನೆ. ರಕ್ತವು ಪ್ರಾಣಾಧಾರವಾಗಿರುವ ಕಾರಣ ಅದರಿಂದ ದೋಷಪರಿಹಾರವಾಗುತ್ತದಷ್ಟೆ.
Kannada Bible (KNCL) BSI 2016
ಏಕೆಂದರೆ ದೇಹಕ್ಕೆ ರಕ್ತವೇ ಪ್ರಾಣಾಧಾರ. ಆ ರಕ್ತವನ್ನು ನೀವು ಬಲಿಪೀಠಕ್ಕೆ ಪ್ರೋಕ್ಷಿಸಿ ನಿಮ್ಮ ನಿಮ್ಮ ದೋಷ ಪರಿಹಾರ ಮಾಡಿಕೊಳ್ಳಬೇಕೆಂದು ಸರ್ವೇಶ್ವರ ಅನುಗ್ರಹಿಸಿದ್ದಾರೆ. ರಕ್ತವು ಪ್ರಾಣಾಧಾರವಾಗಿರುವ ಕಾರಣ ಅದರಿಂದ ದೋಷಪರಿಹಾರವಾಗುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ದೇಹದ ಜೀವವು ರಕ್ತದೊಳಗೆ ಇರುತ್ತದೆ ಮತ್ತು ನಾನು ಅದನ್ನು ನಿಮ್ಮ ಆತ್ಮಗಳಿಗೆ ಪ್ರಾಯಶ್ಚಿತ್ತ ಮಾಡುವುದಕ್ಕಾಗಿ ಬಲಿಪೀಠದ ಮೇಲೆ ನಿಮಗೆ ಕೊಟ್ಟಿದ್ದೇನೆ. ಪ್ರಾಣಕ್ಕೆ ಪ್ರಾಯಶ್ಚಿತ್ತ ಮಾಡುವುದು ರಕ್ತವೇ.