Leviticus 17:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಯಾವನಾದರೂ ಒಂದು ಪ್ರಾಣಿಯನ್ನು ಬೇಟೆಯಾಡಿದರೆ ಅಥವಾ ಪಕ್ಷಿಯನ್ನು ಹಿಡಿದರೆ, ಅವನು ಅದರ ರಕ್ತವನ್ನು ನೆಲದ ಮೇಲೆ ಸುರಿದು ಅದನ್ನು ಮಣ್ಣಿನಿಂದ ಮುಚ್ಚಿಬಿಡಬೇಕು. ಅವನು ಇಸ್ರೇಲನಾದರೂ ನಿಮ್ಮ ಮಧ್ಯದಲ್ಲಿ ವಾಸಿಸುವ ಪರದೇಶಸ್ಥನಾದರೂ ಹಾಗೆಯೇ ಮಾಡಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ಇಸ್ರಾಯೇಲರಲ್ಲಾಗಲಿ ಅವರ ನಡುವೆ ವಾಸವಾಗಿರುವ ಅನ್ಯದೇಶದವರಲ್ಲಿಯಾಗಲಿ ಯಾವನಾದರೂ ಬೇಟೆಯಾಡಿ ತಿನ್ನತಕ್ಕ ಮೃಗವನ್ನು ಇಲ್ಲವೆ ಪಕ್ಷಿಯನ್ನು ಹಿಡಿದರೆ ಅವನು ಅದರ ರಕ್ತವನ್ನು ಸುರಿಸಿ ಮಣ್ಣಿನಿಂದ ಮುಚ್ಚಿಬಿಡಬೇಕು.
Kannada BSI Bible 2016
ಇದಲ್ಲದೆ ಇಸ್ರಾಯೇಲ್‌ ಮಕ್ಕಳಲ್ಲಿ ಯಾವ ಮನುಷ್ಯನಾದರೂ ನಿಮ್ಮೊಳಗೆ ಪ್ರವಾಸಿಯಾಗಿರುವ ಪರಕೀಯನಾದರೂ ತಿನ್ನುವದಕ್ಕಾಗಿ ಬೇಟೆಯಾಡಿ ಯಾವದೇ ಪಶುವನ್ನಾಗಲಿ ಇಲ್ಲವೆ ಪಕ್ಷಿಯನ್ನಾಗಲಿ ಹಿಡಿದರೆ ಅದರ ರಕ್ತವನ್ನೆಲ್ಲಾ ಸುರಿದು ಅದನ್ನು ಮಣ್ಣಿ ನಿಂದ ಮುಚ್ಚಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರಲ್ಲಿಯಾಗಲಿ ಅವರ ನಡುವೆ ಇಳುಕೊಂಡಿರುವ ಅನ್ಯದೇಶದವರಲ್ಲಿಯಾಗಲಿ ಯಾವನಾದರೂ ಬೇಟೆಯಾಡಿ ತಿನ್ನತಕ್ಕ ಮೃಗವನ್ನು ಇಲ್ಲವೆ ಪಕ್ಷಿಯನ್ನು ಹಿಡಿದರೆ ಅವನು ಅದರ ರಕ್ತವನ್ನು ಸುರಿಸಿ ಮಣ್ಣಿನಿಂದ ಮುಚ್ಚಿಬಿಡಬೇಕು.
Kannada Bible (KNCL) BSI 2016
“ಇಸ್ರಯೇಲರಲ್ಲಾಗಲಿ ಅವರ ನಡುವೆ ವಾಸಮಾಡುವ ಅನ್ಯದೇಶೀಯರಲ್ಲಾಗಲಿ ಯಾರಾದರು ಬೇಟೆಮಾಡಿ ತಿನ್ನಬಹುದಾದ ಪ್ರಾಣಿಯನ್ನು ಅಥವಾ ಪಕ್ಷಿಯನ್ನು ಹಿಡಿದರೆ ಅವನು ಅದರ ರಕ್ತವನ್ನು ಸುರಿದು ಮಣ್ಣಿನಿಂದ ಮುಚ್ಚಿಡಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಇದಲ್ಲದೆ ಇಸ್ರಾಯೇಲರು ಯಾವ ಮನುಷ್ಯನಾದರೂ ಇಲ್ಲವೆ ನಿಮ್ಮೊಳಗೆ ಪ್ರವಾಸಿಯಾಗಿರುವ ಪರಕೀಯನಾದರೂ ತಿನ್ನುವುದಕ್ಕಾಗಿ ಬೇಟೆಯಾಡಿ, ಯಾವುದೇ ಪಶುವನ್ನಾಗಲಿ ಇಲ್ಲವೆ ಪಕ್ಷಿಯನ್ನಾಗಲಿ ಹಿಡಿದರೆ, ಅದರ ರಕ್ತವನ್ನೆಲ್ಲಾ ಸುರಿದು ಅದನ್ನು ಮಣ್ಣಿನಿಂದ ಮುಚ್ಚಬೇಕು.