Leviticus 17:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವು ಇದನ್ನು ಯಾಕೆ ಮಾಡಬೇಕೆಂದರೆ, ಮಾಂಸದಲ್ಲಿ ರಕ್ತವು ಇನ್ನೂ ಇದ್ದರೆ, ಅದರ ಪ್ರಾಣವು ಇನ್ನೂ ಮಾಂಸದಲ್ಲಿ ಇದೆ. ಆದ್ದರಿಂದ ನಾನು ಇಸ್ರೇಲರಿಗೆ ಈ ಅಪ್ಪಣೆಯನ್ನು ಕೊಡುತ್ತೇನೆ. ರಕ್ತದಿಂದ ಕೂಡಿರುವ ಮಾಂಸವನ್ನು ತಿನ್ನಬಾರದು. ಯಾವನಾದರೂ ರಕ್ತ ಭೋಜನ ಮಾಡಿದರೆ, ಅವನು ತನ್ನ ಜನರಿಂದ ತೆಗೆದುಹಾಕಲ್ಪಡಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಕೆಂದರೆ ಪ್ರತಿದೇಹಿಗೂ ರಕ್ತವೇ ಪ್ರಾಣಾಧಾರವು. ಆದಕಾರಣ ನಾನು ಇಸ್ರಾಯೇಲರಿಗೆ, ಪ್ರತಿಪ್ರಾಣಿಗೂ ರಕ್ತವೇ ಪ್ರಾಣಾಧಾರವಾದುದರಿಂದ ನೀವು ಯಾವ ವಿಧವಾದ ಪ್ರಾಣಿಯ ರಕ್ತವನ್ನು ಉಣ್ಣಬಾರದು; ರಕ್ತಭೋಜನ ಮಾಡಿದವನಿಗೆ ಬಹಿಷ್ಕಾರವಾಗಬೇಕೆಂದು ಆಜ್ಞಾಪಿಸಿದ್ದೇನೆ.
Kannada BSI Bible 2016
ಯಾಕಂದರೆ ರಕ್ತವೇ ಎಲ್ಲಾ ಶರೀರಗಳ ಜೀವವಾಗಿದೆ; ಅದಕ್ಕಿರುವ ರಕ್ತವು ಅದರ ಜೀವಕ್ಕಾಗಿಯೇ ಇದೆ; ಆದದರಿಂದ ನಾನು ಇಸ್ರಾ ಯೇಲ್‌ ಮಕ್ಕಳಿಗೆ--ನೀವು ಯಾವ ಬಗೆಯ ಶರೀರದ ರಕ್ತವನ್ನೂ ತಿನ್ನಬಾರದೆಂದು ಹೇಳಿದ್ದೇನೆ. ಎಲ್ಲಾ ಶರೀರಗಳ ಜೀವವು ರಕ್ತದಲ್ಲಿಯೇ ಇದೆ; ಇದನ್ನು ತಿನ್ನುವ ಯಾವನಾದರೂ ತೆಗೆದುಹಾಕಲ್ಪಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕಂದರೆ ಪ್ರತಿದೇಹಿಗೂ ರಕ್ತವೇ ಪ್ರಾಣಾಧಾರವು. ಆದಕಾರಣ ನಾನು ಇಸ್ರಾಯೇಲ್ಯರಿಗೆ - ಪ್ರತಿ ಪ್ರಾಣಿಗೂ ರಕ್ತವೇ ಪ್ರಾಣಾಧಾರವಾದದರಿಂದ ನೀವು ಯಾವ ವಿಧವಾದ ಪ್ರಾಣಿಯ ರಕ್ತವನ್ನೂ ಉಣ್ಣಬಾರದು; ರಕ್ತಭೋಜನ ಮಾಡಿದವನಿಗೆ ಬಹಿಷ್ಕಾರವಾಗಬೇಕೆಂದು ಆಜ್ಞಾಪಿಸಿದ್ದೇನೆ.
Kannada Bible (KNCL) BSI 2016
ಏಕೆಂದರೆ ಪ್ರತಿ ದೇಹಕ್ಕೂ ರಕ್ತವೇ ಪ್ರಾಣಾಧಾರ. ಆದಕಾರಣ ಸರ್ವೇಶ್ವರ ಇಸ್ರಯೇಲರಿಗೆ, ಪ್ರತಿ ಪ್ರಾಣಿಗೂ ರಕ್ತವೇ ಪ್ರಾಣಾಧಾರವಾದ್ದರಿಂದ ನೀವು ಯಾವ ವಿಧವಾದ ಪ್ರಾಣಿಯ ರಕ್ತವನ್ನೂ ಉಣ್ಣಬಾರದು; ರಕ್ತಭೋಜನ ಮಾಡಿದವನಿಗೆ ಬಹಿಷ್ಕಾರ ಹಾಕಬೇಕು,’ ಎಂದು ಆಜ್ಞಾಪಿಸಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಅದು ಎಲ್ಲಾ ಶರೀರಗಳ ಜೀವವಾಗಿದೆ. ಅದಕ್ಕಿರುವ ರಕ್ತವು ಅದರ ಜೀವಕ್ಕಾಗಿಯೇ ಇದೆ. ಆದ್ದರಿಂದ ನಾನು ಇಸ್ರಾಯೇಲರಿಗೆ, “ನೀವು ಯಾವ ತರಹದ ರಕ್ತವನ್ನೂ ತಿನ್ನಬಾರದು,” ಎಂದು ಹೇಳಿದ್ದೇನೆ. ಏಕೆಂದರೆ ಎಲ್ಲಾ ಶರೀರಗಳ ಜೀವವೂ ಅದರ ರಕ್ತದಲ್ಲಿಯೇ ಇದೆ. ಅದನ್ನು ತಿನ್ನುವ ಯಾವನನ್ನಾದರೂ ಬಹಿಷ್ಕರಿಸಬೇಕು.