Leviticus 17:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸಮಾಧಾನಯಜ್ಞರೂಪವಾಗಿ ಇದನ್ನು ಯೆಹೋವನಿಗೆ ಅರ್ಪಿಸುವ ಯಜ್ಞಕ್ಕೆ ಇದೇ ನಿಯಮ. ಇಸ್ರೇಲರು ಹೊಲಗಳಲ್ಲಿ ಕೊಲ್ಲುವ ತಮ್ಮ ಪ್ರಾಣಿಗಳನ್ನು ದೇವದರ್ಶನಗುಡಾರದ ಬಾಗಿಲಿಗೆ ಅಂದರೆ ಯೆಹೋವನ ಸನ್ನಿಧಿಯಲ್ಲಿರುವ ಯಾಜಕರ ಬಳಿಗೆ ತರಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಕೆಂದರೆ ಯಜ್ಞಪಶುಗಳನ್ನು ಬಯಲಿನಲ್ಲಿ ವಧಿಸುತ್ತಿದ್ದ ಇಸ್ರಾಯೇಲರು ಇನ್ನು ಮೇಲೆ ಅವುಗಳನ್ನು ದೇವದರ್ಶನದ ಗುಡಾರದ ಬಾಗಿಲಿಗೆ ಯಾಜಕನ ಬಳಿಗೆ ತಂದು, ಯೆಹೋವನ ಮುಂದೆ ಸಮಾಧಾನಯಜ್ಞವಾಗಿ ಯೆಹೋವನಿಗೆ ಸಮರ್ಪಿಸಬೇಕು.
Kannada BSI Bible 2016
ಇಸ್ರಾಯೇಲ್‌ ಮಕ್ಕಳು ತಾವು ಬಯಲಿನಲ್ಲಿ ಸಮರ್ಪಿಸುವ ಬಲಿಗಳನ್ನು ಕರ್ತನಿಗೆ ಸಭೆಯ ಗುಡಾರದ ಬಾಗಿಲಿನ ಬಳಿಯಲ್ಲಿ ಯಾಜಕನ ಬಳಿಗೆ ತಂದು ಕರ್ತನಿಗೆ ಸಮಾಧಾನದ ಬಲಿಯಾಗಿ ಸಮರ್ಪಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕಂದರೆ ಯಜ್ಞಪಶುಗಳನ್ನು ಬೈಲಿನಲ್ಲಿ ವಧಿಸುತ್ತಿದ್ದ ಇಸ್ರಾಯೇಲ್ಯರು ಇನ್ನು ಮೇಲೆ ಅವುಗಳನ್ನು ದೇವದರ್ಶನದ ಗುಡಾರದ ಬಾಗಲಿಗೆ ಯಾಜಕನ ಬಳಿಗೆ ತಂದು ಯೆಹೋವನ ಮುಂದೆ ಸಮಾಧಾನಯಜ್ಞರೂಪವಾಗಿ ಯೆಹೋವನಿಗೇ ಸಮರ್ಪಿಸಬೇಕು.
Kannada Bible (KNCL) BSI 2016
ಏಕೆಂದರೆ ಬಲಿಪ್ರಾಣಿಗಳನ್ನು ಬಯಲಿನಲ್ಲಿ ವಧಿಸುತ್ತಿದ್ದ ಇಸ್ರಯೇಲರು ಇನ್ನು ಮೇಲೆ ಅವುಗಳನ್ನು ದೇವದರ್ಶನದ ಗುಡಾರದ ಬಾಗಿಲಿಗೆ ಯಾಜಕನ ಬಳಿಗೆ ತಂದು ಸರ್ವೇಶ್ವರನ ಮುಂದೆ ಶಾಂತಿಸಮಾಧಾನದ ಬಲಿಯಾಗಿ ಸರ್ವೇಶ್ವರನಿಗೆ ಸಮರ್ಪಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲರು ತಾವು ಬಯಲಿನಲ್ಲಿ ಸಮರ್ಪಿಸುವ ಬಲಿಗಳನ್ನು ಯೆಹೋವ ದೇವರಿಗೆ ದೇವದರ್ಶನದ ಗುಡಾರದ ಬಾಗಿಲಿನ ಬಳಿಯಲ್ಲಿ ಯಾಜಕನ ಬಳಿಗೆ ತಂದು ಯೆಹೋವ ದೇವರಿಗೆ ಸಮಾಧಾನದ ಬಲಿಯಾಗಿ ಸಮರ್ಪಿಸಬೇಕು.