Leviticus 17:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ಯಾಜಕನು ಆ ಪಶುಗಳ ರಕ್ತವನ್ನು ದೇವದರ್ಶನಗುಡಾರದ ಬಾಗಿಲಿನ ಹತ್ತಿರವಿರುವ ಯೆಹೋವನ ಯಜ್ಞವೇದಿಕೆಗೆ ಚೆಲ್ಲುವನು ಮತ್ತು ಅವುಗಳ ಕೊಬ್ಬನ್ನು ಯಜ್ಞವೇದಿಕೆಯ ಮೇಲೆ ಹೋಮಮಾಡುವನು. ಅದರ ಸುವಾಸನೆಯು ಯೆಹೋವನಿಗೆ ಪ್ರಿಯವಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಜಕನು ಅವುಗಳ ರಕ್ತವನ್ನು ದೇವದರ್ಶನದ ಗುಡಾರದ ಬಾಗಿಲಿನ ಮುಂದಿರುವ ಯಜ್ಞವೇದಿಗೆ ಎರಚಿ, ಅವುಗಳ ಕೊಬ್ಬನ್ನು ಹೋಮಮಾಡಿ ಯೆಹೋವನಿಗೆ ಪರಿಮಳವನ್ನು ಉಂಟುಮಾಡಬೇಕು.
Kannada BSI Bible 2016
ಯಾಜಕನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಕರ್ತನ ಯಜ್ಞವೇದಿಯ ಮೇಲೆ ರಕ್ತವನ್ನು ಚಿಮುಕಿಸಬೇಕು. ಕೊಬ್ಬನ್ನು ಕರ್ತನಿಗೆ ಸುಗಂಧವಾಸನೆಯಾಗಿ ಸುಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಜಕನು ಅವುಗಳ ರಕ್ತವನ್ನು ದೇವದರ್ಶನದ ಗುಡಾರದ ಬಾಗಲಿನ ಮುಂದಿರುವ ಯಜ್ಞವೇದಿಗೆ ಎರಚಿ ಅವುಗಳ ಕೊಬ್ಬನ್ನು ಹೋಮಮಾಡಿ ಯೆಹೋವನಿಗೆ ಸುವಾಸನೆಯನ್ನುಂಟುಮಾಡಬೇಕು.
Kannada Bible (KNCL) BSI 2016
ಯಾಜಕನು ಅವುಗಳ ರಕ್ತವನ್ನು ದೇವದರ್ಶನದ ಗುಡಾರದ ಬಾಗಿಲಿನ ಮುಂದಿರುವ ಬಲಿಪೀಠಕ್ಕೆ ಚಿಮುಕಿಸಿ, ಅವುಗಳ ಕೊಬ್ಬನ್ನು ಹೋಮಮಾಡಿ, ಸರ್ವೇಶ್ವರನಿಗೆ ಸುವಾಸನೆಯನ್ನುಂಟುಮಾಡಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾಜಕನು ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿ ಯೆಹೋವ ದೇವರ ಬಲಿಪೀಠದ ಮೇಲೆ ರಕ್ತವನ್ನು ಚಿಮುಕಿಸಬೇಕು. ಕೊಬ್ಬನ್ನು ಯೆಹೋವ ದೇವರಿಗೆ ಆಹ್ಲಾದಕರ ಸುಗಂಧ ವಾಸನೆಯಾಗಿ ಸುಡಬೇಕು.