Leviticus 17:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವನು ತನ್ನ ಬಲಿಯನ್ನು ದೇವದರ್ಶನಗುಡಾರದ ಬಾಗಿಲಿಗೆ ತೆಗೆದುಕೊಂಡು ಬಂದು ಯೆಹೋವನಿಗೆ ಅರ್ಪಿಸಬೇಕು. ಇಲ್ಲವಾದರೆ ಅವನನ್ನು ಅವನ ಕುಲದಿಂದ ತೆಗೆದುಹಾಕಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೇರೆ ವಿಧವಾದ ಯಜ್ಞವನ್ನು ಮಾಡುವಾಗ ಅದರ ಪಶುವನ್ನು ಯೆಹೋವನಿಗೆ ಸಮರ್ಪಿಸುವುದಕ್ಕಾಗಿ ದೇವದರ್ಶನದ ಗುಡಾರದ ಬಾಗಿಲಿಗೆ ತೆಗೆದುಕೊಂಡು ಬಾರದಿದ್ದರೆ ಅವನು ಕುಲದಿಂದ ಹೊರಗೆ ಹಾಕಬೇಕು.
Kannada BSI Bible 2016
ಅದನ್ನು ಕರ್ತನಿಗೆ ಸಮರ್ಪಿಸುವಂತೆ ಸಭೆಯ ಗುಡಾರದ ಬಾಗಿಲ ಬಳಿಗೆ ತಾರದಿದ್ದರೆ ಆ ಮನುಷ್ಯನು ತನ್ನ ಜನಗಳ ಮಧ್ಯ ದೊಳಗಿಂದ ತೆಗೆದುಹಾಕಲ್ಪಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದರ ಪಶುವನ್ನು ಯೆಹೋವನಿಗೆ ಸಮರ್ಪಿಸುವದಕ್ಕಾಗಿ ದೇವದರ್ಶನದ ಗುಡಾರದ ಬಾಗಲಿಗೆ ತಾರದಿದ್ದರೆ ಅವನು ಕುಲದಿಂದ ತೆಗೆದುಹಾಕಲ್ಪಡಬೇಕು.
Kannada Bible (KNCL) BSI 2016
ಆ ಪ್ರಾಣಿಯನ್ನು ಸರ್ವೇಶ್ವರನಿಗೆ ಸಮರ್ಪಿಸುವುದಕ್ಕಾಗಿ ದೇವದರ್ಶನದ ಗುಡಾರದ ಬಾಗಿಲಿಗೆ ತರದಿದ್ದರೆ ಅವನನ್ನು ಕುಲದಿಂದ ತೆಗೆದುಹಾಕಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದನ್ನು ಯೆಹೋವ ದೇವರಿಗೆ ಸಮರ್ಪಿಸುವಂತೆ ದೇವದರ್ಶನದ ಗುಡಾರದ ಬಾಗಿಲ ಬಳಿಗೆ ತಾರದಿದ್ದರೆ, ಆ ಮನುಷ್ಯನನ್ನು ತನ್ನ ಜನರ ಮಧ್ಯದೊಳಗಿಂದ ತೆಗೆದುಹಾಕಬೇಕು.