Leviticus 18:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಒಬ್ಬ ಸ್ತ್ರೀಯೊಡನೆಯೂ ಆಕೆಯ ಮಗಳೊಡನೆಯೂ ಲೈಂಗಿಕ ಸಂಬಂಧ ಮಾಡಬಾರದು. ಆ ಸ್ತ್ರೀಯ ಮೊಮ್ಮಗಳೊಡನೆಯೂ ಲೈಂಗಿಕ ಸಂಬಂಧ ಮಾಡಬಾರದು. ಈ ಮೊಮ್ಮಗಳು ಈ ಸ್ತ್ರೀಯ ಮಗನ ಅಥವಾ ಮಗಳ ಮಗಳಾಗಿರಬಹುದು. ಆಕೆಯ ಮೊಮ್ಮಕ್ಕಳಾದ ಹೆಣ್ಣುಮಕ್ಕಳು ಆಕೆಯ ಹತ್ತಿರದ ಸಂಬಂಧಿಕರಾಗಿದ್ದಾರೆ. ಆಕೆಯೊಡನೆ ಲೈಂಗಿಕ ಸಂಬಂಧ ಮಾಡುವುದು ತಪ್ಪು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಬ್ಬ ಸ್ತ್ರೀಯನ್ನು ಮದುವೆಮಾಡಿಕೊಂಡರೆ ಆಕೆಯ ಮಗಳನ್ನಾಗಲಿ ಇಲ್ಲವೇ ಮೊಮ್ಮಗಳನ್ನಾಗಲಿ ಸಂಗಮಿಸಬಾರದು; ಅವರು ರಕ್ತಸಂಬಂಧಿಗಳಾದುದರಿಂದ ಅದು ದುಷ್ಟ ಕಾರ್ಯವೇ.
Kannada BSI Bible 2016
ನೀನು ಒಬ್ಬ ಸ್ತ್ರೀಯ ಮತ್ತು ಅವಳ ಮಗಳ ಬೆತ್ತಲೆ ತನವನ್ನು ಕಾಣುವಂತೆ ಮಾಡಬಾರದು ಇಲ್ಲವೆ ಅವಳ ಮಗನ ಮಗಳ ಅಥವಾ ಮಗಳ ಮಗಳ ಬೆತ್ತಲೆತನ ವನ್ನು ಕಾಣುವಂತೆ ಮಾಡಬಾರದು. ಅವರು ಅವಳ ಹತ್ತಿರದ ಸಂಬಂಧಿಯಾಗಿದ್ದಾರೆ. ಅದು ದುಷ್ಟತನ ವಾಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಬ್ಬ ಸ್ತ್ರೀಯನ್ನು ಮದುವೆಮಾಡಿಕೊಂಡರೆ ಆಕೆಯ ಮಗಳನ್ನಾಗಲಿ ಮೊಮ್ಮಗಳನ್ನಾಗಲಿ ಸಂಗವಿುಸಬಾರದು; ಅವರು ರಕ್ತಸಂಬಂಧಿಗಳಾದದರಿಂದ ಅದು ದುಷ್ಕಾರ್ಯ.
Kannada Bible (KNCL) BSI 2016
“ಮದುವೆ ಮಾಡಿಕೊಂಡವಳ ಮಗಳನ್ನಾಗಲಿ ಮೊಮ್ಮಗಳನ್ನಾಗಲಿ ಸಂಗಮಿಸಬಾರದು. ಅವರು ರಕ್ತಸಂಬಂಧಿಗಳು, ಅದು ಅಧರ್ಮ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಸ್ತ್ರೀಯೊಂದಿಗೂ, ಆಕೆಯ ಮಗಳೊಂದಿಗೂ ಒಟ್ಟಿಗೆ ಲೈಂಗಿಕ ಸಂಪರ್ಕ ಬೇಡ. ಆಕೆಯ ಮಗನ ಮಗಳೊಂದಿಗಾದರೂ, ಮಗಳ ಮಗಳೊಂದಿಗಾದರೂ ಲೈಂಗಿಕ ಸಂಪರ್ಕ ಬೇಡ. ಅವರು ಆಕೆಯ ಹತ್ತಿರ ಸಂಬಂಧಿಗಳು. ಅದು ದುಷ್ಟತನ.