Leviticus 18:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಆ ದುರಾಚಾರಗಳಲ್ಲಿ ಯಾವುದರಿಂದಲೂ ನಿಮ್ಮನ್ನು ಅಶುದ್ಧರನ್ನಾಗಿ ಮಾಡಿಕೊಳ್ಳಬೇಡಿರಿ. ನಾನು ಜನಾಂಗಗಳನ್ನು ಅವರ ದೇಶಗಳಿಂದ ಹೊರಡಿಸಿ ಅವರ ದೇಶವನ್ನು ನಿಮಗೆ ಕೊಡುತ್ತಿದ್ದೇನೆ. ಯಾಕೆಂದರೆ ಅವರು ಅಂಥ ಭಯಂಕರ ಪಾಪಗಳನ್ನು ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ಈ ದುರಾಚಾರಗಳಲ್ಲಿ ಯಾವುದರಿಂದಲೂ ನೀವು ಅಶುದ್ಧರಾಗಬಾರದು. ನಾನು ನಿಮ್ಮ ಎದುರಿನಿಂದ ಮೊದಲು ಹೊರಡಿಸಿದ ಜನಾಂಗಗಳವರು ಇಂಥ ದುರಾಚಾರಗಳಿಂದ ಅಶುದ್ಧರಾದರು.
Kannada BSI Bible 2016
ನೀವು ಈ ಯಾವ ವಿಷಯಗಳಲ್ಲಿಯೂ ನಿಮ್ಮನ್ನು ಹೊಲೆ ಮಾಡಿಕೊಳ್ಳಬಾರದು. ನಿಮ್ಮ ಮುಂದೆ ನಾನು ಹೊರಡಿಸಿಬಿಟ್ಟ ಜನಾಂಗಗಳು ಇವೆಲ್ಲವುಗಳಲ್ಲಿ ಹೊಲೆಯಾಗಿವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ದುರಾಚಾರಗಳಲ್ಲಿ ಯಾವದರಿಂದಲೂ ನೀವು ಅಶುದ್ಧರಾಗಬಾರದು. ನಾನು ನಿಮ್ಮ ಎದುರಿನಿಂದ ಹೊರಡಿಸುವ ಜನಾಂಗಗಳವರು ಇಂಥ ದುರಾಚಾರಗಳಿಂದ ಅಶುದ್ಧರಾದರು.
Kannada Bible (KNCL) BSI 2016
“ಇಂಥ ದುರಾಚಾರಗಳಾವುದರಿಂದಲೂ ನೀವು ಅಶುದ್ಧರಾಗಬಾರದು. ಏಕೆಂದರೆ ನಾನು ನಿಮಗೆ ಮುಂಚಿತವಾಗಿ ಹೊರಡಿಸುವ ಜನಾಂಗಗಳವರು ಇಂಥ ಅನಾಚಾರಗಳಿಂದಲೇ ಅಶುದ್ಧರಾದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ನೀವು ಈ ಯಾವ ವಿಷಯಗಳಲ್ಲಿಯೂ ನಿಮ್ಮನ್ನು ಅಶುದ್ಧಮಾಡಿಕೊಳ್ಳಬಾರದು. ಏಕೆಂದರೆ ನಿಮ್ಮ ಮುಂದೆಯೇ ನಾನು ಹೊರಡಿಸಿಬಿಟ್ಟ ಜನಾಂಗಗಳು ಇವೆಲ್ಲವುಗಳಿಂದ ಹೊಲೆಯಾಗಿವೆ.