Leviticus 18:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾವನಾದರೂ ಆ ಭಯಂಕರ ಪಾಪಗಳಲ್ಲಿ ಯಾವುದನ್ನಾದರೂ ಮಾಡಿದರೆ, ಆ ವ್ಯಕ್ತಿಯನ್ನು ಅವನ ಜನರಿಂದ ತೆಗೆದುಹಾಕಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾವನಾದರೂ ಈ ಅಸಹ್ಯವಾದ ಕೆಲಸಗಳಲ್ಲಿ ಒಂದನ್ನಾದರೂ ಮಾಡಿದರೆ ಅವನನ್ನು ಕುಲದಿಂದ ಹೊರಗೆ ಹಾಕಬೇಕು.
Kannada BSI Bible 2016
ಯಾವನಾದರೂ ಈ ಅಸಹ್ಯವಾದವುಗಳಲ್ಲಿ ಯಾವ ದನ್ನಾದರೂ ಮಾಡಿದರೆ ಅವುಗಳನ್ನು ಮಾಡುವ ಮನುಷ್ಯರನ್ನು ಅವರ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.ಆದದರಿಂದ ನಿಮಗಿಂತ ಮೊದಲಿನವರು ಮಾಡಿದಂತೆ ಅಸಹ್ಯವಾದ ಆಚರಣೆ ಗಳಲ್ಲಿ ಒಂದನ್ನಾದರೂ ನೀವು ಮಾಡದಂತೆ ಮತ್ತು ಅವುಗಳಲ್ಲಿ ನಿಮ್ಮನ್ನು ಹೊಲೆಮಾಡಿಕೊಳ್ಳದಂತೆ ನೀವು ನನ್ನ ಕಟ್ಟಳೆಗಳನ್ನು ಕೈಕೊಳ್ಳಬೇಕು; ನಿಮ್ಮ ದೇವರಾಗಿರುವ ಕರ್ತನು ನಾನೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾವನಾದರೂ ಈ ಹೇಸಿಗೆಯಾದ ಕೆಲಸಗಳಲ್ಲಿ ಒಂದನ್ನಾದರೂ ಮಾಡಿದರೆ ಅವನು ಕುಲದಿಂದ ತೆಗೆದುಹಾಕಲ್ಪಡಬೇಕು.
Kannada Bible (KNCL) BSI 2016
ಯಾರಾದರೂ ಈ ಅಸಹ್ಯವಾದ ಕಾರ್ಯಗಳಲ್ಲಿ ಒಂದನ್ನು ಮಾಡಿದ್ದೇ ಆದರೆ ಅವನನ್ನು ಕುಲದಿಂದ ತೆಗೆದುಬಿಡಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಏಕೆಂದರೆ ಯಾವನಾದರೂ ಈ ಅಸಹ್ಯವಾದವುಗಳಲ್ಲಿ ಯಾವುದನ್ನಾದರೂ ಮಾಡಿದರೆ, ಅವನನ್ನು ಅವರ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.