Leviticus 18:30 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅನ್ಯಜನರು ಆ ಭಯಂಕರ ಪಾಪಗಳನ್ನು ಮಾಡಿದ್ದಾರೆ. ಆದರೆ ನೀವು ನನ್ನ ಕಟ್ಟಳೆಗಳಿಗೆ ವಿಧೇಯರಾಗಬೇಕು. ನೀವು ಆ ಭಯಂಕರ ಪಾಪಗಳಲ್ಲಿ ಯಾವುದನ್ನೂ ಮಾಡಬಾರದು. ಆ ಭಯಂಕರ ಪಾಪಗಳಿಂದ ನಿಮ್ಮನ್ನು ಹೊಲೆ ಮಾಡಿಕೊಳ್ಳಬೇಡಿರಿ. ನಾನೇ ನಿಮ್ಮ ದೇವರಾದ ಯೆಹೋವನು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದುದರಿಂದ ನಿಮಗಿಂತ ಮುಂಚೆ ನಡೆಯುತ್ತಿದ್ದ ಅಸಹ್ಯವಾದ ಆಚರಣೆಗಳನ್ನು ನಡೆಸಿ ನಿಮ್ಮನ್ನು ಅಶುದ್ಧಮಾಡಿಕೊಳ್ಳದೆ ನನ್ನ ನಿಯಮಗಳನ್ನೇ ಅನುಸರಿಸಿ ನಡೆಯಬೇಕು; ನಾನು ನಿಮ್ಮ ದೇವರಾದ ಯೆಹೋವನು’” ಎಂದು ಹೇಳಿದನು.
Kannada BSI Bible 2016
ಆದದರಿಂದ ನಿಮಗಿಂತ ಮೊದಲಿನವರು ಮಾಡಿದಂತೆ ಅಸಹ್ಯವಾದ ಆಚರಣೆ ಗಳಲ್ಲಿ ಒಂದನ್ನಾದರೂ ನೀವು ಮಾಡದಂತೆ ಮತ್ತು ಅವುಗಳಲ್ಲಿ ನಿಮ್ಮನ್ನು ಹೊಲೆಮಾಡಿಕೊಳ್ಳದಂತೆ ನೀವು ನನ್ನ ಕಟ್ಟಳೆಗಳನ್ನು ಕೈಕೊಳ್ಳಬೇಕು; ನಿಮ್ಮ ದೇವರಾಗಿರುವ ಕರ್ತನು ನಾನೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ನಿಮಗಿಂತ ಮುಂಚೆ ನಡೆಯುತ್ತಿದ್ದ ಅಸಹ್ಯವಾದ ಆಚರಣೆಗಳನ್ನು ನಡಿಸಿ ನಿಮ್ಮನ್ನು ಅಶುದ್ಧಮಾಡಿಕೊಳ್ಳದೆ ನನ್ನ ವಿಧಿಗಳನ್ನೇ ಅನುಸರಿಸಿ ನಡೆಯಬೇಕು; ನಾನು ನಿಮ್ಮ ದೇವರಾದ ಯೆಹೋವನು.
Kannada Bible (KNCL) BSI 2016
ಆದುದರಿಂದ ನಿಮಗಿಂತ ಮುಂಚೆ ನಡೆಯುತ್ತಿದ್ದ ಅಸಹ್ಯವಾದ ಆಚರಣೆಗಳನ್ನು ನಡೆಸಿ ನಿಮ್ಮನ್ನೇ ಅಶುದ್ಧಮಾಡಿಕೊಳ್ಳದೆ ನನ್ನ ವಿಧಿಗಳನ್ನು ಅನುಸರಿಸಿ ನಡೆಯಬೇಕು. ನಾನೇ ನಿಮ್ಮ ದೇವರಾದ ಸರ್ವೇಶ್ವರ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮಗಿಂತ ಮೊದಲಿನವರು ಮಾಡಿದಂತೆ ಅಸಹ್ಯವಾದ ಆಚರಣೆಗಳಲ್ಲಿ ಒಂದನ್ನಾದರೂ ನೀವು ಮಾಡದಂತೆ ಮತ್ತು ಅವುಗಳಲ್ಲಿ ನಿಮ್ಮನ್ನು ಅಶುದ್ಧಮಾಡಿಕೊಳ್ಳದಂತೆ ನೀವು ನನ್ನ ಕಟ್ಟಳೆಗಳನ್ನು ಕೈಗೊಳ್ಳಬೇಕು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.’ ”