Leviticus 18:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವು ನನ್ನ ನಿಯಮಗಳಿಗೆ ವಿಧೇಯರಾಗಿ ನನ್ನ ಕಟ್ಟಳೆಗಳನ್ನು ಅನುಸರಿಸಬೇಕು. ಆ ನಿಯಮಗಳನ್ನು ತಪ್ಪದೆ ಪಾಲಿಸಿರಿ. ಯಾಕೆಂದರೆ ನಾನು ನಿಮ್ಮ ದೇವರಾದ ಯೆಹೋವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನೆಂಬ ನಾನೇ ನಿಮ್ಮ ದೇವರಾಗಿರುವುದರಿಂದ ನನ್ನ ನಿರ್ಣಯಗಳ ಪ್ರಕಾರವೇ ನೀವು ನಡೆಯಬೇಕು, ನನ್ನ ನಿಯಮಗಳನ್ನು ಅನುಸರಿಸಬೇಕು.
Kannada BSI Bible 2016
ನೀವು ನನ್ನ ನಿರ್ಣಯಗಳನ್ನು ಕೈಕೊಂಡು ಅವುಗಳಲ್ಲಿ ನಡೆಯುವ ಹಾಗೆ ನನ್ನ ಕಟ್ಟಳೆಗಳಂತೆ ನಡೆಯಬೇಕು; ನಿಮ್ಮ ದೇವರಾಗಿರುವ ಕರ್ತನು ನಾನೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನೆಂಬ ನಾನೇ ನಿಮ್ಮ ದೇವರಾಗಿರುವದರಿಂದ ನನ್ನ ನಿರ್ಣಯಗಳ ಪ್ರಕಾರವೇ ನೀವು ನಡೆಯಬೇಕು, ನನ್ನ ವಿಧಿಗಳನ್ನು ಅನುಸರಿಸಬೇಕು.
Kannada Bible (KNCL) BSI 2016
ಸರ್ವೇಶ್ವರನೆಂಬ ನಾನೇ ನಿಮ್ಮ ದೇವರಾಗಿರುವುದರಿಂದ ನನ್ನ ನಿರ್ಣಯಗಳ ಪ್ರಕಾರವೇ ನೀವು ನಡೆಯಬೇಕು; ನನ್ನ ವಿಧಿಗಳನ್ನೇ ಅನುಸರಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ನನ್ನ ನಿರ್ಣಯಗಳನ್ನು ಕೈಗೊಂಡು ಕಟ್ಟಳೆಗಳ ಪ್ರಕಾರ ನಡೆಯಬೇಕು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.