Leviticus 18:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನೀವು ಎಂದಿಗೂ ನಿಮ್ಮ ಹತ್ತಿರದ ಸಂಬಂಧಿಗಳೊಂದಿಗೆ ಲೈಂಗಿಕ ಸಂಬಂಧ ಮಾಡಬಾರದು. ನಾನೇ ಯೆಹೋವನು!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ನಿಮ್ಮಲ್ಲಿ ಯಾರೂ ರಕ್ತಸಂಬಂಧವುಳ್ಳ ಸ್ತ್ರೀಯ ಸಹವಾಸವನ್ನು ಮಾಡಬಾರದು, ನಾನು ಯೆಹೋವನು.
Kannada BSI Bible 2016
ನಿಮ್ಮಲ್ಲಿ ಯಾವನಾದರೂ ತನ್ನ ಹತ್ತಿರ ಸಂಬಂಧಿಯ ಬೆತ್ತಲೆತನವನ್ನು ಬಯಲು ಮಾಡುವದಕ್ಕೆ ಅವಳ ಸವಿಾಪಕ್ಕೆ ಹೋಗಬಾರದು; ನಾನೇ ಕರ್ತನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮಲ್ಲಿ ಯಾರೂ ರಕ್ತಸಂಬಂಧವುಳ್ಳ ಸ್ತ್ರೀಯ ಸಹವಾಸವನ್ನು ಮಾಡಬಾರದು; ನಾನು ಯೆಹೋವನು.
Kannada Bible (KNCL) BSI 2016
ನಿಮ್ಮಲ್ಲಿ ಯಾರೂ ರಕ್ತಸಂಬಂಧವುಳ್ಳವರೊಡನೆ ಮೈಗೂಡಿಸಕೂಡದು; ನಾನೇ ಸರ್ವೇಶ್ವರ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ನಿಮ್ಮಲ್ಲಿ ಯಾವನಾದರೂ ತನ್ನ ಹತ್ತಿರ ಸಂಬಂಧಿಯೊಡನೆ ಲೈಂಗಿಕ ಸಂಬಂಧ ಬೆಳೆಸಬಾರದು, ನಾನೇ ಯೆಹೋವ ದೇವರು.