Leviticus 18:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ತಾಯಿಯೊಂದಿಗೆ ಲೈಂಗಿಕ ಸಂಬಂಧ ಮಾಡಿ ನಿಮ್ಮ ತಂದೆಗೆ ಎಂದಿಗೂ ಅವಮಾನ ತರಬಾರದು. ಆಕೆ ನಿಮ್ಮ ತಾಯಿಯಾಗಿದ್ದಾಳೆ. ನೀವು ಆಕೆಯೊಂದಿಗೆ ಎಂದಿಗೂ ಲೈಂಗಿಕ ಸಂಬಂಧ ಮಾಡಬಾರದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತಾಯಿಯನ್ನು ಎಷ್ಟು ಮಾತ್ರವೂ ಸಂಗಮಿಸಬಾರದು, ಆಕೆ ಹೆತ್ತವಳಲ್ಲವೇ; ಸಂಗಮಿಸಿದರೆ ತಂದೆಗೆ ಮಾನಭಂಗವಾಗುವುದು.
Kannada BSI Bible 2016
ನಿನ್ನ ತಂದೆತಾಯಿಯ ಬೆತ್ತಲೆತನವನ್ನಾಗಲಿ ನೀನು ಕಾಣಿಸು ವಂತೆ ಮಾಡಬಾರದು; ಆಕೆಯು ನಿನ್ನ ತಾಯಿಯಾಗಿ ದ್ದಾಳೆ; ನೀನು ಅವಳ ಬೆತ್ತಲೆತನವನ್ನು ಕಾಣುವಂತೆ ಮಾಡಬಾರದು.
Kannada BSI JV (ಕನ್ನಡ ಸತ್ಯವೇದವು J.V. (BSI))
ತಾಯಿಯನ್ನು ಎಷ್ಟು ಮಾತ್ರವೂ ಸಂಗವಿುಸಬಾರದು; ಆಕೆ ಹೆತ್ತವಳಲ್ಲವೆ; ಸಂಗವಿುಸಿದರೆ ತಂದೆಗೆ ಮಾನಭಂಗವಾಗುವದು.
Kannada Bible (KNCL) BSI 2016
“ನಿನ್ನ ತಂದೆಯೊಡನೇ ಆಗಲಿ, ತಾಯಿಯೊಡನೆ ಆಗಲಿ ಸಂಭೋಗಿಸಕೂಡದು, ತಾಯಿಯೊಡನೆ ಎಷ್ಟು ಮಾತ್ರವೂ ಸಂಗಮಿಸಬಾರದು. ಆಕೆ ನಿನ್ನ ಹೆತ್ತ ತಾಯಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ನಿನ್ನ ತಾಯಿಯೊಂದಿಗೆ ಲೈಂಗಿಕ ಸಂಬಂಧ ಮಾಡಿ, ನಿನ್ನ ತಂದೆಯನ್ನು ಅಗೌರವಿಸಬೇಡ. ಆಕೆ ನಿನ್ನ ತಾಯಿ: ಆಕೆಯೊಂದಿಗೆ ಇಂಥ ಸಂಬಂಧ ಬೇಡ.