Leviticus 18:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಮಲತಾಯಿಯೊಂದಿಗೂ ಲೈಂಗಿಕ ಸಂಬಂಧ ಮಾಡಬಾರದು. ಅದು ನಿಮ್ಮ ತಂದೆಗೆ ಅವಮಾನ ತರುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮಲತಾಯಿಯ ಜೊತೆ ಸಂಗಮಿಸಬಾರದು; ಆಕೆ ತಂದೆಗೆ ಹೆಂಡತಿಯಾದವಳಲ್ಲವೇ.
Kannada BSI Bible 2016
ನಿನ್ನ ತಂದೆಯ ಹೆಂಡತಿಯ ಬೆತ್ತಲೆ ತನವನ್ನು ನೀನು ಕಾಣುವಂತೆ ಮಾಡಬಾರದು; ಅದು ನಿನ್ನ ತಂದೆಯ ಬೆತ್ತಲೆತನ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮಲತಾಯಿಯ ಸಂಗ ಮಾಡಬಾರದು; ಆಕೆ ತಂದೆಗೆ ಹೆಂಡತಿಯಾದವಳಲ್ಲವೇ.
Kannada Bible (KNCL) BSI 2016
“ಮಲತಾಯಿಯನ್ನು ಸಂಭೋಗಿಸಬಾರದು; ಹಾಗೆ ಮಾಡಿದರೆ ತಂದೆಗೆ ಮಾನಭಂಗವಾಗುವುದು. ಆಕೆ ನಿನ್ನ ತಂದೆಯ ಅರ್ಧಾಂಗಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ನಿನ್ನ ಮಲತಾಯಿಯೊಂದಿಗೆ ಲೈಂಗಿಕ ಸಂಬಂಧ ಮಾಡಬೇಡ. ಅದು ನಿನ್ನ ತಂದೆಗೆ ಅಗೌರವವನ್ನುಂಟು ಮಾಡುವುದು.