Leviticus 18:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಸಹೋದರಿಯೊಂದಿಗೆ, ಅಂದರೆ ನಿಮ್ಮ ತಂದೆ ಅಥವಾ ತಾಯಿಯ ಮಗಳೊಂದಿಗೆ ಲೈಂಗಿಕ ಸಂಬಂಧ ಮಾಡಬಾರದು. ನಿಮ್ಮ ಸಹೋದರಿಯು ನಿಮ್ಮ ಮನೆಯಲ್ಲಾಗಲಿ ಅಥವಾ ಇನ್ನೊಂದು ಸ್ಥಳದಲ್ಲಾಗಲಿ ಹುಟ್ಟಿದರೂ ಆಕೆಯೊಡನೆ ಲೈಂಗಿಕ ಸಂಬಂಧ ಮಾಡಬಾರದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತಂದೆಯ ಮಗಳನ್ನಾಗಲಿ ಅಥವಾ ತಾಯಿಯ ಮಗಳನ್ನಾಗಲಿ ಸಂಗಮಿಸಬಾರದು; ಅವರು ಒಡ ಹುಟ್ಟಿದವರು ಇಲ್ಲವೇ ಪರಸ್ತ್ರೀಯಲ್ಲಿ ಹುಟ್ಟಿದವರಾದರೂ ನಿಮಗೆ ಅಕ್ಕತಂಗಿಯರಲ್ಲವೇ.
Kannada BSI Bible 2016
ನಿನ್ನ ಸಹೋದರಿಯ ಇಲ್ಲವೆ ನಿನ್ನ ತಂದೆಯ ಮಗಳ, ಅಂದರೆ ಅವಳು ಮನೆಯಲ್ಲಿ ಹುಟ್ಟಿದವಳಾಗಿರಲಿ ಹೊರಗೆ ಹುಟ್ಟಿದ ವಳಾಗಿರಲಿ ಅವರ ಬೆತ್ತಲೆತನವನ್ನು ಕಾಣುವಂತೆ ನೀನು ಮಾಡಬಾರದು.
Kannada BSI JV (ಕನ್ನಡ ಸತ್ಯವೇದವು J.V. (BSI))
ತಂದೆಯ ಮಗಳನ್ನಾಗಲಿ ತಾಯಿಯ ಮಗಳನ್ನಾಗಲಿ ಇಟ್ಟುಕೊಳ್ಳಬಾರದು; ಅವರು ಒಡಹುಟ್ಟಿದವರಾದರೂ ಪರಸ್ತ್ರೀಯಲ್ಲಿ ಹುಟ್ಟಿದವರಾದರೂ ನಿಮಗೆ ಅಕ್ಕತಂಗಿಯರಲ್ಲವೇ.
Kannada Bible (KNCL) BSI 2016
“ತಂದೆಯ ಮಗಳನ್ನಾಗಲಿ, ತಾಯಿಯ ಮಗಳನ್ನಾಗಲಿ ಸಂಭೋಗಿಸಬಾರದು; ಅವರು ಒಡಹುಟ್ಟಿದವರು; ಪರಸ್ತ್ರೀಯರಲ್ಲಿ ಹುಟ್ಟಿದವರಾದರೂ ಅವರು ನಿಮಗೆ ಅಕ್ಕತಂಗಿಯರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ನಿನ್ನ ಸಹೋದರಿಯೊಂದಿಗೆ ಲೈಂಗಿಕ ಸಂಬಂಧ ಮಾಡಬೇಡ. ಆಕೆ ನಿನ್ನ ತಂದೆಯ ಮಗಳಾಗಿರಬಹುದು ಇಲ್ಲವೆ ತಾಯಿಯ ಮಗಳಾಗಿರಬಹುದು. ಆಕೆ ಒಂದೇ ಮನೆಯಲ್ಲಿ ಹುಟ್ಟಿರಬಹುದು ಇಲ್ಲವೆ ಬೇರೆ ಕಡೆಯಲ್ಲಿ ಹುಟ್ಟಿರಬಹುದು ಆಕೆಯೊಂದಿಗೆ ಲೈಂಗಿಕ ಸಂಬಂಧ ಮಾಡಬೇಡ.