Leviticus 19:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನೀವು ಕಿವುಡನನ್ನು ಶಪಿಸಬಾರದು. ಕುರುಡನು ಬೀಳುವಂತೆ ನೀವು ಅವನ ಮುಂದೆ ಅಡ್ಡವಾಗಿ ಏನನ್ನೂ ಇಡಬಾರದು. ಆದರೆ ನೀವು ನಿಮ್ಮ ದೇವರನ್ನು ಸನ್ಮಾನಿಸಬೇಕು. ನಾನೇ ನಿಮ್ಮ ದೇವರಾದ ಯೆಹೋವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಿವುಡರನ್ನು ದೂಷಿಸಬಾರದು; ಕುರುಡರು ನಡೆಯುವ ದಾರಿಯಲ್ಲಿ ಅವರ ಕಾಲು ಎಡವುವಂತೆ ಕಲ್ಲನ್ನು ಇಡಬಾರದು; ನಿಮ್ಮ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳಬೇಕು. ನಾನು ಯೆಹೋವನು.
Kannada BSI Bible 2016
ಕಿವುಡನನ್ನು ಶಪಿಸಬಾರದು; ಕುರು ಡನು ಮುಗ್ಗರಿಸುವಂತೆ ಅವನ ಮುಂದೆ ಕಲ್ಲನ್ನು ಇಡ ಬಾರದು, ಆದರೆ ನಿನ್ನ ದೇವರಿಗೆ ಭಯಪಡಬೇಕು; ನಾನೇ ಕರ್ತನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಿವುಡರನ್ನು ದೂಷಿಸಬಾರದು; ಕುರುಡರು ನಡೆಯುವ ದಾರಿಯಲ್ಲಿ ಕಾಲು ಎಡವುವಂತೆ ಕಲ್ಲನ್ನು ಇಡಬಾರದು; ನಿಮ್ಮ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳಬೇಕು. ನಾನು ಯೆಹೋವನು.
Kannada Bible (KNCL) BSI 2016
ಕಿವುಡರನ್ನು ದೂಷಿಸಬೇಡ; ಕುರುಡರು ನಡೆಯುವ ದಾರಿಯಲ್ಲಿ ಎರಡು ಕಲ್ಲನ್ನು ಇಡಬೇಡ, ನಿನ್ನ ದೇವರಲ್ಲಿ ಭಯಭಕ್ತಿಯಿರಲಿ, ನಾನೇ ಸರ್ವೇಶ್ವರ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಕಿವುಡನನ್ನು ಶಪಿಸಬಾರದು. ಇಲ್ಲವೆ ಕಣ್ಣು ಕಾಣದವನನ್ನು ಮುಗ್ಗರಿಸುವಂತೆ ಮಾಡಬಾರದು. ನಿಮ್ಮ ದೇವರಿಗೆ ಭಯಪಡಬೇಕು. ನಾನೇ ಯೆಹೋವ ದೇವರು.