Leviticus 19:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಬೇರೆ ಜನರ ವಿರುದ್ಧ ಚಾಡಿ ಹೇಳಬಾರದು. ನಿಮ್ಮ ನೆರೆಯವನ ಪ್ರಾಣವನ್ನು ಅಪಾಯಕ್ಕೆ ಈಡುಮಾಡುವ ಯಾವ ಕಾರ್ಯವನ್ನೂ ನೀವು ಮಾಡಬಾರದು. ನಾನೇ ಯೆಹೋವನು!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ಪರಿಚಯವುಳ್ಳವರಲ್ಲಿ ಒಬ್ಬರ ಮೇಲೊಬ್ಬರು ಚಾಡಿಹೇಳಬಾರದು. ನೆರೆಯವನಿಗೆ ಮರಣ ಶಿಕ್ಷೆಯಾಗಲೇಬೇಕು ಎಂದು ಹಠ ಹಿಡಿಯಬಾರದು. ನಾನು ಯೆಹೋವನು.
Kannada BSI Bible 2016
ನಿನ್ನ ಜನರ ಮಧ್ಯದಲ್ಲಿ ಚಾಡಿಗಾರನಾಗಿ ತಿರುಗಾಡಬೇಡ; ನಿನ್ನ ನೆರೆಯವನ ರಕ್ತಾಪರಾಧಕ್ಕೆ ಕಾರಣನಾಗಬೇಡ; ನಾನೇ ಕರ್ತನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪರಿಚಯವುಳ್ಳವರಲ್ಲಿ ಒಬ್ಬರ ಮೇಲೊಬ್ಬರು ಚಾಡಿಹೇಳಬಾರದು. ಮತ್ತೊಬ್ಬನಿಗೆ ಮರಣ ಶಿಕ್ಷೆಯಾಗಲೇಬೇಕೆಂದು ಛಲ ಹಿಡಿಯಬಾರದು. ನಾನು ಯೆಹೋವನು.
Kannada Bible (KNCL) BSI 2016
“ನಿನ್ನ ಜನರ ನಡುವೆ ಚಾಡಿಕೋರನಾಗಿ ತಿರುಗಾಡಬೇಡ; ಮತ್ತೊಬ್ಬನಿಗೆ ಮರಣಶಿಕ್ಷೆ ಆಗಲೇಬೇಕೆಂದು ಛಲಹಿಡಿಯಬೇಡ. ನಾನೇ ಸರ್ವೇಶ್ವರ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ನಿನ್ನ ಜನರ ಮಧ್ಯದಲ್ಲಿ ಚಾಡಿಗಾರನಾಗಿ ತಿರುಗಾಡಬೇಡ. “ ‘ನಿನ್ನ ನೆರೆಯವನ ರಕ್ತಾಪರಾಧಕ್ಕೆ ಕಾರಣನಾಗಬೇಡ. ನಾನೇ ಯೆಹೋವ ದೇವರು.