Leviticus 19:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಜನರು ನಿಮಗೆ ಮಾಡುವ ಕೆಟ್ಟಕಾರ್ಯಗಳನ್ನು ಮರೆತುಬಿಡಿರಿ. ನಿಮ್ಮ ಜನರಲ್ಲಿ ಒಬ್ಬನಾಗಿರುವವನ ಮೇಲೆ ಸೇಡನ್ನು ತೀರಿಸಿಕೊಳ್ಳಲು ಪ್ರಯತ್ನಿಸಬೇಡಿರಿ; ದ್ವೇಷವನ್ನೂ ಇಟ್ಟುಕೊಳ್ಳಬೇಡಿ. ನಿಮ್ಮ ನೆರೆಯವನನ್ನು ನಿಮ್ಮಂತೆಯೇ ಪ್ರೀತಿಸಿರಿ. ನಾನೇ ಯೆಹೋವನು!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ನಿಮ್ಮ ಸ್ವಜನರಲ್ಲಿ ಯಾರಿಗೂ ಕೇಡಿಗೆ ಕೇಡನ್ನು ಮಾಡದೆ, ಮನಸ್ಸಿನಲ್ಲಿ ಮತ್ಸರವನ್ನು ಇಟ್ಟುಕೊಳ್ಳದೆ, ನಿಮ್ಮ ನೆರೆಯವರನ್ನು ನಿಮ್ಮಂತೆಯೇ ಪ್ರೀತಿಸಬೇಕು. ನಾನು ಯೆಹೋವನು.
Kannada BSI Bible 2016
ನಿನ್ನ ಜನರ ಮಕ್ಕಳ ಮೇಲೆ ಮುಯ್ಯಿಗೆಮುಯ್ಯಿ ತೀರಿಸದವ ನಾಗಿಯೂ ಸೇಡು ತೀರಿಸದೆಯೂ ಇರು. ಆದರೆ ನೀನು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು; ನಾನೇ ಕರ್ತನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ಸ್ವಜನರಲ್ಲಿ ಯಾರಿಗಾದರೂ ಕೇಡಿಗೆ ಕೇಡನ್ನು ಮಾಡದೆ ಮನಸ್ಸಿನಲ್ಲಿ ಮತ್ಸರವನ್ನು ಇಟ್ಟುಕೊಳ್ಳದೆ ನಿಮ್ಮ ನೆರೆಯವರನ್ನು ನಿಮ್ಮಂತೆಯೇ ಪ್ರೀತಿಸಬೇಕು. ನಾನು ಯೆಹೋವನು.
Kannada Bible (KNCL) BSI 2016
ನಿನ್ನ ಸ್ವಜನರಲ್ಲಿ ಯಾರಿಗೂ ಕೇಡಿಗೆ ಕೇಡು ಮಾಡಬೇಡ, ಅವರಿಗೆ ವಿರುದ್ಧ ಮತ್ಸರ ಇಟ್ಟುಕೊಳ್ಳಬೇಡ; ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು. ನಾನು ಸರ್ವೇಶ್ವರ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ನಿನ್ನ ಜನರ ಮಕ್ಕಳ ಮೇಲೆ ಮುಯ್ಯಿಗೆ ಮುಯ್ಯಿ ತೀರಿಸದವನಾಗಿಯೂ, ಸೇಡು ತೀರಿಸದೆಯೂ ಇರು. ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು. ನಾನೇ ಯೆಹೋವ ದೇವರು.