Leviticus 19:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಐದನೆಯ ವರ್ಷದಲ್ಲಿ, ನೀವು ಆ ಮರದ ಹಣ್ಣನ್ನು ತಿನ್ನಬಹುದು ಮತ್ತು ಮರವು ನಿಮಗೆ ಹೆಚ್ಚೆಚ್ಚಾಗಿ ಹಣ್ಣನ್ನು ನೀಡುವುದು. ನಾನೇ ನಿಮ್ಮ ದೇವರಾದ ಯೆಹೋವನು!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಐದನೆಯ ವರ್ಷದಲ್ಲಿ ಅದರಿಂದ ಉಂಟಾಗುವ ಆದಾಯವು ನಿಮ್ಮದೇ ಆಗಿರುವುದು; ಅದರ ಫಲಗಳನ್ನು ನೀವು ತಿನ್ನಬಹುದು. ನಾನು ನಿಮ್ಮ ದೇವರಾದ ಯೆಹೋವನು.
Kannada BSI Bible 2016
ಐದನೆಯ ವರುಷ ದಲ್ಲಿ ಅದು ನಿಮಗೆ ಇನ್ನೂ ಸಮೃದ್ಧಿಯಾಗಿ ಫಲಿಸು ವಂತೆ ನೀವು ಅದರ ಫಲವನ್ನು ತಿನ್ನಬೇಕು; ನಿಮ್ಮ ದೇವರಾಗಿರುವ ಕರ್ತನು ನಾನೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಐದನೆಯ ವರುಷದಲ್ಲಿ ಅದರಿಂದುಂಟಾಗುವ ಆದಾಯವು ನಿಮ್ಮದೇ ಆಗಿರುವದು; ಅದರ ಫಲಗಳನ್ನು ನೀವು ತಿನ್ನಬಹುದು. ನಾನು ನಿಮ್ಮ ದೇವರಾದ ಯೆಹೋವನು.
Kannada Bible (KNCL) BSI 2016
ಐದನೆಯ ವರ್ಷದಲ್ಲಿ ಅಂದು ಮೊದಲ್ಗೊಂಡು ಅದರ ಫಲಗಳನ್ನು ನೀವು ತಿನ್ನಬಹುದು. ನಿಮಗೆ ಹೆಚ್ಚು ಫಲ ದೊರಕುವುದು. ನಿಮ್ಮ ದೇವರಾದ ಸರ್ವೇಶ್ವರ ನಾನೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಐದನೆಯ ವರುಷದಲ್ಲಿ ಅದರ ಫಲವನ್ನು ನೀವು ತಿನ್ನಬೇಕು. ಆಗ ಅದು ನಿಮಗೆ ಇನ್ನೂ ಸಮೃದ್ಧಿಯಾಗಿ ಫಲಿಸುವುದು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.