Leviticus 19:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸತ್ತವರನ್ನು ಜ್ಞಾಪಕ ಮಾಡಿಕೊಳ್ಳುವುದಕ್ಕಾಗಿ ನಿಮ್ಮ ದೇಹವನ್ನು ಗಾಯ ಮಾಡಿಕೊಳ್ಳಬಾರದು. ಶರೀರದ ಮೇಲೆ ಹಚ್ಚೇ ಚುಚ್ಚಿಸಿಕೊಳ್ಳಬಾರದು. ನಾನೇ ಯೆಹೋವನು!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ಸತ್ತವರಿಗೋಸ್ಕರ ದುಃಖವನ್ನು ಸೂಚಿಸುವುದಕ್ಕಾಗಿ ದೇಹವನ್ನು ಗಾಯಮಾಡಿಕೊಳ್ಳಬಾರದು. ಶರೀರದ ಮೇಲೆ ಹಚ್ಚೇ ಹಾಕಿಸಿಕೊಳ್ಳಬಾರದು. ನಾನು ಯೆಹೋವನು.
Kannada BSI Bible 2016
ಸತ್ತವರಿ ಗಾಗಿ ನಿಮ್ಮ ಶರೀರವನ್ನು ಕೊಯ್ದುಕೊಳ್ಳಬಾರದು, ನಿಮ್ಮ ಮೇಲೆ ಯಾವ ಚಿನ್ಹೆಗಳನ್ನೂ ಮುದ್ರಿಸಿಕೊಳ್ಳ ಬಾರದು; ನಾನೇ ಕರ್ತನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸತ್ತವರಿಗೋಸ್ಕರ ದುಃಖವನ್ನು ಸೂಚಿಸುವದಕ್ಕಾಗಿ ದೇಹವನ್ನು ಗಾಯಮಾಡಿಕೊಳ್ಳಬಾರದು. ಶರೀರದ ಮೇಲೆ ಹಚ್ಚೇ ಚುಚ್ಚಿಸಿಕೊಳ್ಳಬಾರದು. ನಾನು ಯೆಹೋವನು.
Kannada Bible (KNCL) BSI 2016
ಸತ್ತವರಿಗಾಗಿ ಸಂತಾಪ ಸೂಚಿಸಲು ದೇಹವನ್ನು ಗಾಯಗೊಳಿಸಿಕೊಳ್ಳಬೇಡ. ಶರೀರದ ಮೇಲೆ ಹಚ್ಚೇಚುಚ್ಚಿಸಿಕೊಳ್ಳಬೇಡ. ನಾನು ಸರ್ವೇಶ್ವರ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಸತ್ತವರಿಗಾಗಿ ನಿಮ್ಮ ಶರೀರವನ್ನು ಕೊಯ್ದುಕೊಳ್ಳಬಾರದು. ನಿಮ್ಮ ಮೇಲೆ ಯಾವ ಹಚ್ಚೆಗಳನ್ನೂ ಹಚ್ಚಿಸಿಕೊಳ್ಳಬಾರದು. ನಾನೇ ಯೆಹೋವ ದೇವರು.