Leviticus 19:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಮಗಳನ್ನು ಸೂಳೆಯನ್ನಾಗಿ ಮಾಡಬಾರದು. ಇದರಿಂದ ಸೂಳೆಗಾರಿಕೆ ಹೆಚ್ಚಾಗುತ್ತದೆ. ನಿಮ್ಮ ದೇಶದಲ್ಲಿ ಸೂಳೆಗಾರಿಕೆ ಇರದಂತೆ ನೋಡಿಕೊಳ್ಳಿರಿ. ಇಂಥ ಪಾಪದಿಂದ ನಿಮ್ಮ ದೇಶವು ತುಂಬಿಹೋಗಲು ಬಿಡಬೇಡಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ಮಗಳನ್ನು ವೇಶ್ಯೆಯನ್ನಾಗಿ ಮಾಡಬಾರದು. ಹಾಗೆ ಮಾಡಿದರೆ ವೇಶ್ಯಾವಾಟಿಕೆ ಪ್ರಬಲವಾಗಿ ದೇಶದಲ್ಲೆಲ್ಲಾ ತುಂಬಿಹೋಗುವುದು.
Kannada BSI Bible 2016
ನಿನ್ನ ಮಗಳು ಸೂಳೆಯಾಗುವಂತೆ ವ್ಯಭಿಚಾರಕ್ಕೆ ಬಿಡಬೇಡ; ಬಿಟ್ಟರೆ ಅದರಿಂದ ದೇಶವು ಸೂಳೆತನಕ್ಕೆ ಒಳಪಟ್ಟು, ದೇಶವು ಎಲ್ಲಾ ಕೆಟ್ಟತನದಿಂದ ತುಂಬು ವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮಗಳನ್ನು ಬಸವಿಬಿಟ್ಟು ಸೂಳೆಯನ್ನಾಗಿ ಮಾಡಬಾರದು. ಹಾಗೆ ಮಾಡಿದರೆ ಸೂಳೆಗಾರಿಕೆ ಪ್ರಬಲವಾಗಿ ದೇಶದಲ್ಲೆಲ್ಲಾ ತುಂಬಿಹೋಗುವದು.
Kannada Bible (KNCL) BSI 2016
“ಮಗಳನ್ನು ಬಸವಿಬಿಟ್ಟು ವೇಶ್ಯೆಯನ್ನಾಗಿ ಮಾಡಬೇಡ. ಹಾಗೆ ಮಾಡಿದರೆ ಸೂಳೆಗಾರಿಕೆ ಪ್ರಬಲವಾಗಿ ನಾಡಿನಲ್ಲೆಲ್ಲಾ ತುಂಬಿಹೋಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ನಿನ್ನ ಮಗಳು ವೇಶ್ಯೆಯಾಗುವಂತೆ ವ್ಯಭಿಚಾರಕ್ಕೆ ಬಿಡಬಾರದು. ಹಾಗೆ ಮಾಡಿದರೆ, ದೇಶವು ವೇಶ್ಯೆತನಕ್ಕೆ ಒಳಪಡುವುದು ಮತ್ತು ಕೆಟ್ಟತನದಿಂದ ತುಂಬಿಹೋಗುವುದು.