Leviticus 19:31 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸಲಹೆಗಾಗಿ, ಸತ್ತವರಲ್ಲಿ ವಿಚಾರಿಸುವವರ ಮತ್ತು ಬೇತಾಳಿಕರ ಬಳಿಗೆ ಹೋಗಬೇಡಿರಿ. ಅವರು ನಿಮ್ಮನ್ನು ಕೇವಲ ಅಶುದ್ಧರನ್ನಾಗಿ ಮಾಡುವರು. ನಾನೇ ನಿಮ್ಮ ದೇವರಾದ ಯೆಹೋವನು!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ಸತ್ತವರಲ್ಲಿ ವಿಚಾರಿಸುವವರ ಮತ್ತು ಮಂತ್ರವಾದಿಗಳ ಹತ್ತಿರ ಹೋಗಬಾರದು; ಅವರ ಆಲೋಚನೆಯನ್ನು ಕೇಳಿ ಅಶುದ್ಧರಾಗಬಾರದು. ನಾನು ನಿಮ್ಮ ದೇವರಾದ ಯೆಹೋವನು.
Kannada BSI Bible 2016
ಮಂತ್ರವಾದಿಗಳನ್ನು ಲಕ್ಷಿಸಬೇಡ, ಅಲ್ಲದೆ ಅವರಿಂದ ಹೊಲೆಯಾಗದಂತೆ ಮಾಟಗಾರ ರನ್ನು ಅನುಸರಿಸಬೇಡ; ನಿಮ್ಮ ದೇವರಾಗಿರುವ ಕರ್ತನು ನಾನೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸತ್ತವರಲ್ಲಿ ವಿಚಾರಿಸುವವರ ಮತ್ತು ಬೇತಾಳಿಕರ ಹತ್ತಿರ ಹೋಗಬಾರದು; ಅವರ ಆಲೋಚನೆಯನ್ನು ಕೇಳಿ ಅಶುದ್ಧರಾಗಬಾರದು. ನಾನು ನಿಮ್ಮ ದೇವರಾದ ಯೆಹೋವನು.
Kannada Bible (KNCL) BSI 2016
“ಭೂತಪ್ರೇತಗಳನ್ನು ವಿಚಾರಿಸುವವರ ಬಳಿಗೆ ಹೋಗಬೇಡ; ಅವರ ಆಲೋಚನೆಯನ್ನು ಕೇಳಿ ಅಶುದ್ಧನಾಗಬೇಡ. ನಾನು ಸರ್ವೇಶ್ವರ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಮಾಟಗಾರರನ್ನು ಲಕ್ಷಿಸಬೇಡ, ಅಲ್ಲದೆ ಅವರಿಂದ ಅಶುದ್ಧವಾಗದಂತೆ ಭೂತಪ್ರೇತಗಳನ್ನು ವಿಚಾರಿಸುವವರನ್ನು ಅನುಸರಿಸಬೇಡ. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.