Leviticus 19:36 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿಮ್ಮ ಪುಟ್ಟಿಗಳು ಸರಿಯಾದ ಪ್ರಮಾಣದ್ದಾಗಿರಬೇಕು. ನಿಮ್ಮ ಕೊಳಗಗಳು ದ್ರವಪದಾರ್ಥಗಳನ್ನು ಸರಿಯಾದ ಪ್ರಮಾಣದಲ್ಲಿ ಹಿಡಿಸಿಕೊಳ್ಳುವಂತವುಗಳಾಗಿರಬೇಕು. ನಿಮ್ಮ ತೂಕದ ಕಲ್ಲುಗಳು ಮತ್ತು ತಕ್ಕಡಿಗಳು ವಸ್ತುಗಳನ್ನು ಸರಿಯಾಗಿ ತೂಕ ಮಾಡುವಂಥವುಗಳಾಗಿರಬೇಕು. ನಾನೇ ನಿಮ್ಮ ದೇವರಾದ ಯೆಹೋವನು! ನಾನು ನಿಮ್ಮನ್ನು ಈಜಿಪ್ಟಿನಿಂದ ಹೊರತಂದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತಕ್ಕಡಿ, ತೂಕದ ಕಲ್ಲು, ಕೊಳಗ ಮತ್ತು ಸೇರು ಇವುಗಳೆಲ್ಲಾ ನ್ಯಾಯವಾಗಿಯೇ ಇರಬೇಕು. ನಾನು ನಿಮ್ಮನ್ನು ಐಗುಪ್ತದೇಶದಿಂದ ಬರಮಾಡಿದ ನಿಮ್ಮ ದೇವರಾದ ಯೆಹೋವನು ನಾನೇ.
Kannada BSI Bible 2016
ನ್ಯಾಯದತ್ರಾಸು, ನ್ಯಾಯದ ಕಲ್ಲುಗಳು, ನ್ಯಾಯದಎಫವು ಮತ್ತು ನ್ಯಾಯದಹೀನ್ ನಿಮಗಿರಬೇಕು. ಐಗುಪ್ತದೇಶದೊಳಗಿಂದ ನಿಮ್ಮನ್ನು ಹೊರಗೆ ತಂದ ನಿಮ್ಮ ದೇವರಾದ ಕರ್ತನು ನಾನೇ.ಆದದರಿಂದ ನನ್ನ ಎಲ್ಲಾ ನಿಯಮಗಳನ್ನೂ ನ್ಯಾಯ ಗಳನ್ನೂ ಕೈಕೊಂಡು ಅವುಗಳನ್ನು ಮಾಡಬೇಕು; ನಾನೇ ಕರ್ತನು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತಕ್ಕಡಿ, ತೂಕದ ಕಲ್ಲು, ಕೊಳಗ, ಸೇರು ಇವುಗಳೆಲ್ಲಾ ನ್ಯಾಯವಾಗಿಯೇ ಇರಬೇಕು. ನಾನು ನಿಮ್ಮನ್ನು ಐಗುಪ್ತದೇಶದಿಂದ ಬರಮಾಡಿದ ನಿಮ್ಮ ದೇವರಾದ ಯೆಹೋವನು.
Kannada Bible (KNCL) BSI 2016
ತಕ್ಕಡಿ, ತೂಕದಕಲ್ಲು, ಕೊಳಗ, ಸೇರು ಇವುಗಳೆಲ್ಲವು ನ್ಯಾಯಬದ್ಧವಾಗಿಯೇ ಇರಬೇಕು. ಈಜಿಪ್ಟಿನಿಂದ ನಿಮ್ಮನ್ನು ಬರಮಾಡಿದ ನಿಮ್ಮ ದೇವರಾದ ಸರ್ವೇಶ್ವರ ನಾನೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತಕ್ಕಡಿ, ತೂಕದ ಕಲ್ಲುಗಳು, ಕಿಲೋಗ್ರಾಂ ಮತ್ತು ಲೀಟರ್ ನ್ಯಾಯಯುತವಾಗಿರಲಿ. ಈಜಿಪ್ಟ್ ದೇಶದೊಳಗಿಂದ ನಿಮ್ಮನ್ನು ಹೊರಗೆ ತಂದ ನಿಮ್ಮ ದೇವರಾದ ಯೆಹೋವ ದೇವರು ನಾನೇ.