Leviticus 19:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀವು ಅರ್ಪಿಸಿದ ದಿನದಲ್ಲಿ ಅಥವಾ ಮರುದಿನದಲ್ಲಿ ಅದನ್ನು ತಿನ್ನಬಹುದು. ಆದರೆ ಆ ಯಜ್ಞದಲ್ಲಿ ಏನಾದರೂ ಮೂರನೆಯ ದಿನದವರೆಗೆ ಉಳಿದರೆ, ನೀವು ಅದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಮಾಡುವ ಯಜ್ಞದ ಮಾಂಸವನ್ನು ಆ ದಿನದಲ್ಲಿಯಾಗಲಿ ಇಲ್ಲವೇ ಮರುದಿನದಲ್ಲಿಯಾಗಲಿ ಊಟಮಾಡಬೇಕು. ಮೂರನೆಯ ದಿನದವರೆಗೆ ಏನಾದರೂ ಉಳಿದರೆ ಅದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.
Kannada BSI Bible 2016
ಅದನ್ನು ನೀವು ಸಮರ್ಪಿಸಿದ ದಿನ ದಲ್ಲಿಯೂ ಮಾರನೆಯ ದಿನದಲ್ಲಿಯೂ ತಿನ್ನಬೇಕು; ಆದರೆ ಅದು ಮೂರನೆಯ ದಿನದ ವರೆಗೆ ಉಳಿದರೆ ಅದನ್ನು ಬೆಂಕಿಯಲ್ಲಿ ಸುಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಮಾಡುವ ಯಜ್ಞದ ಮಾಂಸವನ್ನು ಆ ದಿನದಲ್ಲಿಯಾಗಲಿ ಮರುದಿನದಲ್ಲಿಯಾಗಲಿ ಊಟಮಾಡಬೇಕು. ಮೂರನೆಯ ದಿನದವರೆಗೆ ಏನಾದರೂ ವಿುಕ್ಕಿದ್ದರೆ ಅದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.
Kannada Bible (KNCL) BSI 2016
ನೀವು ಮಾಡುವ ಬಲಿದಾನದ ಮಾಂಸವನ್ನು ಅದೇ ದಿನದಲ್ಲಿ ಅಥವಾ ಮರುದಿನದಲ್ಲಿ ಊಟಮಾಡಿಬಿಡಬೇಕು. ಮೂರನೆಯ ದಿನದವರೆಗೆ ಏನಾದರೂ ಮಿಕ್ಕಿದ್ದರೆ ಅದನ್ನು ಬೆಂಕಿಯಲ್ಲಿ ಸುಟ್ಟುಬಿಡಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದನ್ನು ನೀವು ಸಮರ್ಪಿಸಿದ ದಿನದಲ್ಲಿಯೂ ಮಾರನೆಯ ದಿನದಲ್ಲಿಯೂ ತಿನ್ನಬೇಕು. ಆದರೆ ಅದು ಮೂರನೆಯ ದಿನದವರೆಗೆ ಉಳಿದರೆ ಅದನ್ನು ಬೆಂಕಿಯಲ್ಲಿ ಸುಡಬೇಕು.