Leviticus 19:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಸುಗ್ಗಿಕಾಲದಲ್ಲಿ ನಿಮ್ಮ ಬೆಳೆಯನ್ನು ಕೊಯ್ಯುವಾಗ, ಹೊಲಗಳ ಮೂಲೆಗಳಲ್ಲಿರುವುದನ್ನೆಲ್ಲಾ ಕೊಯ್ಯಬೇಡಿರಿ; ಧಾನ್ಯವೇನಾದರೂ ನೆಲದ ಮೇಲೆ ಬಿದ್ದರೆ ಅದನ್ನು ಕೂಡಿಸಿಕೊಳ್ಳಬಾರದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ನೀವು ಪೈರುಗಳನ್ನು ಕೊಯ್ಯುವಾಗ ಹೊಲಗಳ ಮೂಲೆಗಳಲ್ಲಿ ಇರುವುದನ್ನೆಲ್ಲಾ ಕೊಯ್ಯಬಾರದು ಮತ್ತು ಕೊಯ್ದಾಗ ಹಕ್ಕಲಾಯಬಾರದು.
Kannada BSI Bible 2016
ನೀವು ನಿಮ್ಮ ಭೂಮಿಯ ಪೈರನ್ನು ಕೊಯ್ಯುವಾಗ ನಿಮ್ಮ ಹೊಲದ ಮೂಲೆಗಳಲ್ಲಿ ಸಂಪೂರ್ಣವಾಗಿ ಕೊಯ್ಯಬಾರದು ಇಲ್ಲವೆ ನಿಮ್ಮ ಸುಗ್ಗಿಯ ಹಕ್ಕಲುಗಳನ್ನು ಕೂಡಿಸಬಾರದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಪೈರುಗಳನ್ನು ಕೊಯ್ಯುವಾಗ ಹೊಲಗಳ ಮೂಲೆಗಳಲ್ಲಿರುವದನ್ನೆಲ್ಲಾ ಕೊಯ್ಯಬಾರದು; ಮತ್ತು ಕೊಯ್ದಾಗ ಹಕ್ಕಲಾಯಬಾರದು.
Kannada Bible (KNCL) BSI 2016
“ನೀವು ಹೊಲಕೊಯ್ಯುವಾಗ ಮೂಲೆಮೂಲೆಗಳಲ್ಲಿರುವುದನ್ನೆಲ್ಲಾ ಕೊಯ್ಯಬಾರದು; ಕೊಯ್ದಾದ ಮೇಲೆ ಹಕ್ಕಲಾಯಬಾರದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ನೀವು ನಿಮ್ಮ ಭೂಮಿಯ ಪೈರನ್ನು ಕೊಯ್ಯುವಾಗ, ನಿಮ್ಮ ಹೊಲದ ಮೂಲೆಗಳಲ್ಲಿ ಸಂಪೂರ್ಣವಾಗಿ ಕೊಯ್ಯಬಾರದು. ಇಲ್ಲವೆ ನಿಮ್ಮ ಸುಗ್ಗಿಯ ಹಕ್ಕಲುಗಳನ್ನು ಕೂಡಿಸಬಾರದು.