Leviticus 2:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಒಬ್ಬನು ದೇವರಾದ ಯೆಹೋವನಿಗೆ ಧಾನ್ಯಸಮರ್ಪಣೆ ಮಾಡಬೇಕೆಂದಿದ್ದರೆ, ಅದು ಗೋಧಿಹಿಟ್ಟಾಗಿರಬೇಕು. ಅವನು ಈ ಹಿಟ್ಟಿನ ಮೇಲೆ ಎಣ್ಣೆಯನ್ನು ಹೊಯಿದು, ಧೂಪವನ್ನಿಡಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ಯಾವನಾದರೂ ಯೆಹೋವನಿಗೆ ಧಾನ್ಯನೈವೇದ್ಯವನ್ನು ಮಾಡಬೇಕೆಂದಿದ್ದರೆ ಅದು ಗೋದಿಹಿಟ್ಟಿನದಾಗಿರಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಹೊಯ್ದು ಅದರ ಮೇಲೆ ಧೂಪವನ್ನು ಇಡಬೇಕು.
Kannada BSI Bible 2016
ಯಾರಾದರೂ ಕರ್ತನಿಗೆ ಆಹಾರ ಸಮರ್ಪಣೆಯನ್ನು ಸಮರ್ಪಿಸುವದಾದರೆ ಅವನ ಸಮರ್ಪಣೆಯು ನಯವಾದ ಹಿಟ್ಟಿನದ್ದಾಗಿರ ಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಸುರಿಯ ಬೇಕು; ಅದರ ಮೇಲೆ ಸಾಂಬ್ರಾಣಿಯನ್ನು ಹಾಕಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾವನಾದರೂ ಯೆಹೋವನಿಗೆ ಧಾನ್ಯ ನೈವೇದ್ಯ ಮಾಡಬೇಕೆಂದಿದ್ದರೆ ಅದು ಗೋದಿಹಿಟ್ಟಾಗಿರಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಹೊಯಿದು ಧೂಪವನ್ನಿಟ್ಟು
Kannada Bible (KNCL) BSI 2016
“ಯಾರಾದರು ಸರ್ವೇಶ್ವರ ಸ್ವಾಮಿಗೆ ಧಾನ್ಯವನ್ನು ನೈವೇದ್ಯ ಮಾಡಬೇಕೆಂದಿದ್ದರೆ ಅದು ಗೋದಿ ಹಿಟ್ಟಾಗಿರಬೇಕು. ಅದರ ಮೇಲೆ ಎಣ್ಣೆಹೊಯ್ದು, ಸಾಂಬ್ರಾಣಿಯನ್ನಿಟ್ಟು, ಅದನ್ನು ಆರೋನನ ವಂಶಜರಾದ ಯಾಜಕರ ಬಳಿಗೆ ತರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಯಾರಾದರೂ ಯೆಹೋವ ದೇವರಿಗೆ ಧಾನ್ಯ ಸಮರ್ಪಣೆಯನ್ನು ಸಮರ್ಪಿಸುವುದಾದರೆ ಅವನ ಸಮರ್ಪಣೆಯು ನಯವಾದ ಹಿಟ್ಟಿನದ್ದಾಗಿರಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಸುರಿಸಬೇಕು, ಅದರ ಮೇಲೆ ಸಾಂಬ್ರಾಣಿಯನ್ನು ಹಾಕಬೇಕು.