Leviticus 2:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಧಾನ್ಯನೈವೇದ್ಯದಲ್ಲಿ ಉಳಿದದ್ದು ಆರೋನನಿಗೂ ಅವನ ಪುತ್ರರಿಗೂ ಸೇರುವುದು. ಅಗ್ನಿಯ ಮೂಲಕ ಯೆಹೋವನಿಗೆ ಮಾಡಿದ ಈ ನೈವೇದ್ಯವು ಮಹಾಪರಿಶುದ್ಧವಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಧಾನ್ಯ ನೈವೇದ್ಯದಲ್ಲಿ ಉಳಿದದ್ದು ಆರೋನನಿಗೂ ಮತ್ತು ಅವನ ವಂಶದವರಿಗೂ ಕೊಡಬೇಕು; ಅದು ಯೆಹೋವನಿಗೆ ಅರ್ಪಿತವಾದ ಹೋಮಶೇಷವಾದ್ದರಿಂದ ಅತಿಪರಿಶುದ್ಧವಾಗಿದೆ.
Kannada BSI Bible 2016
ಆಹಾರ ಸಮರ್ಪಣೆಯಲ್ಲಿ ಉಳಿದದ್ದು ಆರೋನನಿಗೂ ಅವನ ಕುಮಾರರಿಗೂ ಆಗಬೇಕು. ಅದು ಬೆಂಕಿಯಿಂದ ಮಾಡಿದ್ದಾಗಿದ್ದು ಕರ್ತನ ಸಮ ರ್ಪಣೆಗಳಲ್ಲಿ ಅತಿ ಪರಿಶುದ್ಧವಾಗಿರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೈವೇದ್ಯದಲ್ಲಿ ವಿುಕ್ಕದ್ದು ಆರೋನನಿಗೂ ಅವನ ವಂಶದವರಿಗೂ ಆಗಬೇಕು; ಅದು ಯೆಹೋವನಿಗೆ ಅರ್ಪಿತವಾದ ಹೋಮಶೇಷವಾದದರಿಂದ ಮಹಾಪರಿಶುದ್ಧವಾಗಿದೆ.
Kannada Bible (KNCL) BSI 2016
ಈ ಕಾಣಿಕೆಯಲ್ಲಿ ಮಿಕ್ಕದ್ದು ಆರೋನನಿಗೂ ಅವನ ವಂಶಜರಿಗೂ ಸೇರತಕ್ಕದ್ದು. ಸರ್ವೇಶ್ವರನಿಗೆ ಸಮರ್ಪಿತವಾಗಿ ಉಳಿಕೆಯಾದದ್ದು ಮಹಾಪರಿಶುದ್ಧವಾದುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಧಾನ್ಯ ಸಮರ್ಪಣೆಯಲ್ಲಿ ಉಳಿದದ್ದನ್ನು ಆರೋನನೂ ಅವನ ಪುತ್ರರೂ ತೆಗೆದುಕೊಳ್ಳಬೇಕು. ಅದು ಬೆಂಕಿಯಿಂದ ಮಾಡಿದ್ದಾಗಿದ್ದು ಯೆಹೋವ ದೇವರ ಸಮರ್ಪಣೆಗಳಲ್ಲಿ ಮಹಾಪರಿಶುದ್ಧವಾಗಿರುವುದು.