Leviticus 2:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನೀವು ಹುಳಿಹಿಟ್ಟಿನಿಂದ ಮಾಡಿದ ಯಾವದನ್ನೂ ಯೆಹೋವನಿಗೆ ಧಾನ್ಯಸಮರ್ಪಣೆಯಾಗಿ ಕೊಡಬಾರದು. ನೀವು ಹುಳಿಯನ್ನಾಗಲಿ ಜೇನುತುಪ್ಪವನ್ನಾಗಲಿ ಯೆಹೋವನಿಗೆ ಅಗ್ನಿಯ ಮೂಲಕ ಹೋಮಮಾಡಬಾರದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ನೀವು ಯೆಹೋವನಿಗೆ ಧಾನ್ಯ ನೈವೇದ್ಯವಾಗಿ ಸಮರ್ಪಿಸುವ ಯಾವ ಪದಾರ್ಥವನ್ನು ಹುಳಿಹಿಟ್ಟಿನಿಂದ ಮಾಡಬಾರದು. ಯಾವ ಹುಳಿಪದಾರ್ಥವನ್ನಾಗಲಿ ಅಥವಾ ಜೇನುತುಪ್ಪವನ್ನಾಗಲಿ ಯೆಹೋವನಿಗೆ ಹೋಮಮಾಡಬಾರದು.
Kannada BSI Bible 2016
ಕರ್ತನಿಗೆ ನೀನು ತರುವ ಆಹಾರ ಸಮರ್ಪಣೆಯು ಯಾವದೂ ಹುಳಿಯಿಂದ ಮಾಡಿದ್ದಾಗಿರಬಾರದು; ಕರ್ತನಿಗೆ ನೀವು ಬೆಂಕಿಯಿಂದ ಮಾಡುವ ಎಲ್ಲಾ ಸಮರ್ಪಣೆಗಳಲ್ಲಿ ಹುಳಿಯನ್ನಾಗಲಿ ಜೇನನ್ನಾಗಲಿ ಸುಡಬಾರದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಯೆಹೋವನಿಗೆ ನೈವೇದ್ಯವಾಗಿ ಸಮರ್ಪಿಸುವ ಯಾವ ಪದಾರ್ಥವನ್ನಾಗಲಿ ಹುಳಿಹಿಟ್ಟಿನಿಂದ ಮಾಡಬಾರದು. ಯಾವ ಹುಳಿಪದಾರ್ಥವನ್ನಾಗಲಿ ಸಿಹಿಪದಾರ್ಥವನ್ನಾಗಲಿ ಯೆಹೋವನಿಗೆ ಹೋಮ ಮಾಡಕೂಡದು.
Kannada Bible (KNCL) BSI 2016
“ನೀವು ಸರ್ವೇಶ್ವರನಿಗೆ ಕಾಣಿಕೆಯಾಗಿ ಸಮರ್ಪಿಸುವ ಯಾವ ಧಾನ್ಯದ ಪದಾರ್ಥವನ್ನಾಗಲಿ ಹುಳಿಹಿಟ್ಟಿನಿಂದ ಮಾಡಬಾರದು. ಯಾವ ಹುಳಿಪದಾರ್ಥವನ್ನಾಗಲಿ ಸಿಹಿಪದಾರ್ಥವನ್ನಾಗಲಿ ಸರ್ವೇಶ್ವರನಿಗೆ ಹೋಮಮಾಡಕೂಡದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಯೆಹೋವ ದೇವರಿಗೆ ನೀನು ತರುವ ಧಾನ್ಯ ಸಮರ್ಪಣೆಯು ಯಾವುದೂ ಹುಳಿಯಿಂದ ಮಾಡಿದ್ದಾಗಿರಬಾರದು. ಏಕೆಂದರೆ ಯೆಹೋವ ದೇವರಿಗೆ ನೀವು ಬೆಂಕಿಯಿಂದ ಮಾಡುವ ಯಾವ ಸಮರ್ಪಣೆಯಲ್ಲಿ ಹುಳಿಯನ್ನಾಗಲಿ, ಜೇನನ್ನಾಗಲಿ ಬೆರೆಸಬಾರದು.