Leviticus 2:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವು ಹುಳಿಯನ್ನು ಮತ್ತು ಜೇನುತುಪ್ಪವನ್ನು ಪ್ರಥಮಫಲವಾಗಿ ಅರ್ಪಿಸಬಹುದು. ಆದರೆ ಹುಳಿಯನ್ನು ಮತ್ತು ಜೇನುತುಪ್ಪವನ್ನು ವೇದಿಕೆಯ ಮೇಲೆ ಹೋಮಮಾಡಕೂಡದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವುಗಳನ್ನು ಪ್ರಥಮಫಲವಾಗಿ ಯೆಹೋವನಿಗೆ ಸಮರ್ಪಿಸಬಹುದೇ ಹೊರತು ಯಜ್ಞವೇದಿಯ ಮೇಲೆ ಪರಿಮಳವನ್ನು ಉಂಟುಮಾಡುವುದಕ್ಕಾಗಿ ಅವುಗಳನ್ನು ಹೋಮಮಾಡಬಾರದು.
Kannada BSI Bible 2016
ಪ್ರಥಮ ಫಲದ ಕಾಣಿಕೆಯ ವಿಷಯ ದಲ್ಲಿಯಾದರೋ ನೀವು ಅವುಗಳನ್ನು ಕರ್ತನಿಗೆ ಸಮ ರ್ಪಿಸಬೇಕು; ಆದರೆ ಅವುಗಳನ್ನು ಯಜ್ಞವೇದಿಯ ಮೇಲೆ ಸುವಾಸನೆಗಾಗಿ ಸುಡಬಾರದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವುಗಳನ್ನು ಪ್ರಥಮಫಲವಾಗಿ ಯೆಹೋವನಿಗೆ ಸಮರ್ಪಿಸಬಹುದೇ ಹೊರತು ಯಜ್ಞವೇದಿಯ ಮೇಲೆ ಸುವಾಸನೆಯನ್ನುಂಟುಮಾಡುವದಕ್ಕಾಗಿ ಹೋಮಮಾಡಕೂಡದು.
Kannada Bible (KNCL) BSI 2016
ಅವುಗಳನ್ನು ಪ್ರಥಮ ಫಲವಾಗಿ ಸರ್ವೇಶ್ವರನಿಗೆ ಸಮರ್ಪಿಸಬಹುದೇ ಹೊರತು ಬಲಿಪೀಠದ ಮೇಲೆ ಸುವಾಸನೆಯನ್ನುಂಟುಮಾಡುವುದಕ್ಕಾಗಿ ಹೋಮ ಮಾಡಕೂಡದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪ್ರಥಮ ಫಲದ ಕಾಣಿಕೆಯ ವಿಷಯದಲ್ಲಿಯಾದರೋ ನೀವು ಅವುಗಳನ್ನು ಯೆಹೋವ ದೇವರಿಗೆ ಸಮರ್ಪಿಸಬೇಕು. ಆದರೆ ಅವುಗಳನ್ನು ಬಲಿಪೀಠದ ಮೇಲೆ ಸುವಾಸನೆಗಾಗಿ ಸುಡಬಾರದು.