Leviticus 2:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಧಾನ್ಯಸಮರ್ಪಣೆಯಲ್ಲಿ ಉಳಿದ ಭಾಗವು ಆರೋನನಿಗೂ ಅವನ ಪುತ್ರರಿಗೂ ಸೇರಿದ್ದಾಗಿವೆ. ಅಗ್ನಿಯ ಮೂಲಕ ಯೆಹೋವನಿಗೆ ಮಾಡಿದ ಈ ಸಮರ್ಪಣೆಯು ಮಹಾಪರಿಶುದ್ಧವಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ನೈವೇದ್ಯದಲ್ಲಿ ಉಳಿದದ್ದು ಆರೋನನಿಗೂ ಮತ್ತು ಅವನ ವಂಶದವರಿಗೂ ಆಗಬೇಕು; ಅದು ಯೆಹೋವನಿಗೆ ಅರ್ಪಿತವಾದ ಹೋಮಶೇಷಗಳಲ್ಲಿ ಅತಿಪರಿಶುದ್ಧವಾಗಿದೆ.
Kannada BSI Bible 2016
ಆಹಾರದ ಸಮರ್ಪಣೆ ಯಲ್ಲಿ ಉಳಿದದ್ದು ಆರೋನನಿಗೂ ಅವನ ಕುಮಾರ ರಿಗೂ ಆಗಬೇಕು; ಅದು ಬೆಂಕಿಯಿಂದ ಮಾಡಿದ ಕರ್ತನ ಸಮರ್ಪಣೆಗಳಲ್ಲಿ ಅತಿ ಪರಿಶುದ್ಧವಾದದ್ದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ನೈವೇದ್ಯದಲ್ಲಿ ವಿುಕ್ಕದ್ದು ಆರೋನನಿಗೂ ಅವನ ವಂಶದವರಿಗೂ ಆಗಬೇಕು; ಅದು ಯೆಹೋವನಿಗೆ ಅರ್ಪಿತವಾದ ಹೋಮಶೇಷವಾದದರಿಂದ ಮಹಾಪರಿಶುದ್ಧವಾಗಿದೆ.
Kannada Bible (KNCL) BSI 2016
ಈ ಕಾಣಿಕೆಯಲ್ಲಿ ಮಿಕ್ಕದ್ದು ಆರೋನನಿಗೂ ಅವನ ವಂಶದವರಿಗೂ ಸೇರತಕ್ಕದ್ದು. ಸರ್ವೇಶ್ವರನಿಗೆ ಸಮರ್ಪಿತವಾಗಿ ಉಳಿಯುವ ಹೋಮಶೇಷವು ಮಹಾಪರಿಶುದ್ಧವಾದುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಧಾನ್ಯ ಸಮರ್ಪಣೆಯಲ್ಲಿ ಉಳಿದದ್ದನ್ನು ಆರೋನನೂ ಅವನ ಪುತ್ರರೂ ತೆಗೆದುಕೊಳ್ಳಬೇಕು. ಅದು ಬೆಂಕಿಯಿಂದ ಮಾಡಿದ್ದಾಗಿದ್ದು ಯೆಹೋವ ದೇವರ ಸಮರ್ಪಣೆಗಳಲ್ಲಿ ಮಹಾಪರಿಶುದ್ಧವಾಗಿರುವುದು.