Leviticus 2:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಒಬ್ಬನು ಒಲೆಯಲ್ಲಿ ಬೇಯಿಸಿದ ಧಾನ್ಯನೈವೇದ್ಯವನ್ನು ಅರ್ಪಿಸಿದರೆ, ಆಗ ಅದು ಎಣ್ಣೆ ಬೆರೆಸಿದ ಹುಳಿಯಿಲ್ಲದ ರೊಟ್ಟಿಯಾಗಲಿ ಅಥವಾ ಎಣ್ಣೆ ಹೊಯಿದು ಮಾಡಿದ ಕಡುಬುಗಳಾಗಲಿ ಆಗಿರಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ನೀವು ಒಲೆಯಲ್ಲಿ ಅಡಿಗೆಮಾಡಿದ್ದನ್ನು ನೈವೇದ್ಯವಾಗಿ ಸಮರ್ಪಿಸಬೇಕಾದರೆ, ಅದು ಎಣ್ಣೆ ಬೆರೆಸಿದ ಹುಳಿಯಿಲ್ಲದ ಗೋದಿಹಿಟ್ಟಿನ ಹೋಳಿಗೆಗಳು ಅಥವಾ ಎಣ್ಣೆ ಹಾಕಿದ ಹುಳಿಯಿಲ್ಲದ ಕಡುಬುಗಳು ಆಗಿರಬೇಕು.
Kannada BSI Bible 2016
ನೀನು ಒಲೆಯಲ್ಲಿ ಸುಟ್ಟ ಆಹಾರ ಸಮರ್ಪಣೆ ಯನ್ನು ಕಾಣಿಕೆಯಾಗಿ ತರುವದಾದರೆ ಅದು ಹುಳಿ ಯಿಲ್ಲದ್ದಾಗಿ ಎಣ್ಣೆಯಿಂದ ಬೆರೆಸಿದ ನಯವಾದ ಹಿಟ್ಟಿನ ರೊಟ್ಟಿಗಳು ಇಲ್ಲವೆ ಹುಳಿಯಿಲ್ಲದ ಎಣ್ಣೆ ಹೊಯ್ದ ದೋಸೆಗಳಾಗಿರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಒಲೆಯಲ್ಲಿ ಅಡಿಗೆಮಾಡಿದ್ದನ್ನು ನೈವೇದ್ಯವಾಗಿ ಸಮರ್ಪಿಸಬೇಕಾದರೆ ಅದು ಎಣ್ಣೆ ಬೆರಸಿದ ಹುಳಿಯಿಲ್ಲದ ಗೋದಿಹಿಟ್ಟಿನ ಹೋಳಿಗೆಗಳಾದರೂ ಎಣ್ಣೆ ಹಾಕಿದ ಹುಳಿಯಿಲ್ಲದ ಕಡುಬುಗಳಾದರೂ ಆಗಿರಬೇಕು.
Kannada Bible (KNCL) BSI 2016
“ನೀವು ಒಲೆಯಲ್ಲಿ ಅಡಿಗೆ ಮಾಡಿದ್ದನ್ನು ನೈವೇದ್ಯವಾಗಿ ಸಮರ್ಪಿಸಬೇಕಾದರೆ ಅದು ಎಣ್ಣೆ ಬೆರೆಸಿದ ಹುಳಿಯಿಲ್ಲದ ಗೋದಿ ಹಿಟ್ಟಿನ ಹೋಳಿಗೆಗಳಾಗಿರಲಿ ಅಥವಾ ಎಣ್ಣೆ ಹಾಕಿದ ಹುಳಿಯಿಲ್ಲದ ಕಡುಬುಗಳಾಗಿರಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ನೀನು ಒಲೆಯಲ್ಲಿ ಸುಟ್ಟ ಧಾನ್ಯ ಸಮರ್ಪಣೆಯನ್ನು ಕಾಣಿಕೆಯಾಗಿ ತರುವುದಾದರೆ, ಅದು ಹುಳಿಯಿಲ್ಲದ ಮತ್ತು ಎಣ್ಣೆಯಿಂದ ಬೆರೆಸಿದ ನಯವಾದ ಹಿಟ್ಟಿನ ರೊಟ್ಟಿಗಳು ಇಲ್ಲವೆ ಹುಳಿಯಿಲ್ಲದ ಎಣ್ಣೆ ಹೊಯ್ದ ದೋಸೆಗಳಾಗಿರಬೇಕು.