Leviticus 2:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನೀವು ಈ ವಸ್ತುಗಳಿಂದ ಮಾಡಿದ ಧಾನ್ಯನೈವೇದ್ಯಗಳನ್ನು ಯೆಹೋವನಿಗೆ ಅರ್ಪಿಸುವುದಾದರೆ ನೀವು ಆ ವಸ್ತುಗಳನ್ನು ಯಾಜಕನ ಬಳಿಗೆ ತೆಗೆದುಕೊಂಡು ಹೋಗಬೇಕು. ಅವನು ಅದನ್ನು ವೇದಿಕೆಯ ಮೇಲಿಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಈ ಪದಾರ್ಥಗಳಿಂದ ಮಾಡಿದ ನೈವೇದ್ಯವನ್ನು ಯೆಹೋವನಿಗೆ ಸಮರ್ಪಿಸುವಾಗ ಅದನ್ನು ಯಾಜಕನಿಗೆ ಒಪ್ಪಿಸಬೇಕು; ಅವನೇ ಅದನ್ನು ಯಜ್ಞವೇದಿಯ ಬಳಿಗೆ ತರಬೇಕು.
Kannada BSI Bible 2016
ನೀನು ಇವುಗಳಿಂದ ಮಾಡಿದ ಆಹಾರ ಸಮರ್ಪಣೆಯನ್ನು ಕರ್ತನಿಗೆ ತರಬೇಕು; ಅದು ಯಾಜಕನಿಗೆ ಒಪ್ಪಿಸಿದಾಗ ಅವನು ಅದನ್ನು ಯಜ್ಞವೇದಿಗೆ ತರುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಈ ಮೂರು ವಿಧವಾದ ನೈವೇದ್ಯವನ್ನು ಯೆಹೋವನಿಗೆ ಸಮರ್ಪಿಸುವದಾದರೆ ಯಾಜಕನಿಗೆ ಒಪ್ಪಿಸಬೇಕು; ಅವನೇ ಅದನ್ನು ಯಜ್ಞವೇದಿಯ ಬಳಿಗೆ ತರಬೇಕು.
Kannada Bible (KNCL) BSI 2016
ನೀವು ಈ ಮೂರು ವಿಧವಾದ ನೈವೇದ್ಯವನ್ನು ಸಮರ್ಪಿಸುವುದಾದರೆ ಅವುಗಳನ್ನು ಯಾಜಕನಿಗೆ ಒಪ್ಪಿಸಬೇಕು. ಅವನೇ ಅದನ್ನು ಬಲಿಪೀಠದ ಬಳಿಗೆ ತರಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ಇವುಗಳಿಂದ ಮಾಡಿದ ಧಾನ್ಯ ಸಮರ್ಪಣೆಯನ್ನು ಯೆಹೋವ ದೇವರಿಗೆ ತರಬೇಕು. ಅದು ಯಾಜಕನಿಗೆ ಒಪ್ಪಿಸಿದಾಗ, ಅವನು ಅದನ್ನು ಬಲಿಪೀಠದ ಬಳಿಗೆ ತರುವನು.