Leviticus 2:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಯಾಜಕನು ಧಾನ್ಯನೈವೇದ್ಯದ ಸ್ವಲ್ಪ ಭಾಗವನ್ನು ತೆಗೆದುಕೊಂಡು ನೈವೇದ್ಯವಾದದ್ದನ್ನು ಸೂಚಿಸುವುದಕ್ಕಾಗಿ ವೇದಿಕೆಯ ಮೇಲೆ ಹೋಮಮಾಡುವನು. ಅದು ಅಗ್ನಿಯ ಮೂಲಕ ಮಾಡಿದ ಸಮರ್ಪಣೆಯಾಗಿದೆ. ಅದರ ಸುವಾಸನೆಯು ಯೆಹೋವನಿಗೆ ಪ್ರಿಯವಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಜಕನು ನೈವೇದ್ಯವನ್ನು ಯೆಹೋವನ ಒಳ್ಳೆಯತನವನ್ನು ಸೂಚಿಸುವುದಕ್ಕಾಗಿ ಅದರಲ್ಲಿ ಸ್ವಲ್ಪಭಾಗವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದು.
Kannada BSI Bible 2016
ಆಗ ಯಾಜಕನು ಅದರಿಂದ ಜ್ಞಾಪಕಾರ್ಥವಾದ ಆಹಾರ ಸಮರ್ಪಣೆ ಯನ್ನಾಗಿ ತೆಗೆದುಕೊಂಡು ಅದನ್ನು ಯಜ್ಞವೇದಿಯ ಮೇಲೆ ಸುಡಬೇಕು: ಅದು ಬೆಂಕಿಯಿಂದ ಮಾಡಿ ದ್ದಾಗಿದ್ದು ಕರ್ತನಿಗೆ ಸುವಾಸನೆಯ ಸಮರ್ಪಣೆಯಾಗಿ ರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಜಕನು ನೈವೇದ್ಯವನ್ನು ಸೂಚಿಸುವದಕ್ಕಾಗಿ ಅದರಲ್ಲಿ ಸ್ವಲ್ಪಭಾಗವನ್ನು ಪ್ರತ್ಯೇಕಿಸಿ ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಸುವಾಸನೆಯನ್ನುಂಟುಮಾಡುವದು.
Kannada Bible (KNCL) BSI 2016
ಯಾಜಕನು ಅದು ಸಮರ್ಪಿತವಾದುದೆಂದು ಸೂಚಿಸುವುದಕ್ಕಾಗಿ ಅದರಲ್ಲಿ ಸ್ವಲ್ಪ ಭಾಗವನ್ನು ಪ್ರತ್ಯೇಕಿಸಿ ಬಲಿಪೀಠದ ಮೇಲೆ ಹೋಮಮಾಡಲಿ. ಅದು ಸರ್ವೇಶ್ವರನಿಗೆ ಪ್ರಿಯವಾದ ಸುಗಂಧಕರ ದಹನ ಬಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯಾಜಕನು ಅದರಿಂದ ಜ್ಞಾಪಕಾರ್ಥವಾಗಿ ಧಾನ್ಯ ಸಮರ್ಪಣೆಯನ್ನಾಗಿ ತೆಗೆದುಕೊಂಡು ಅದನ್ನು ಬಲಿಪೀಠದ ಮೇಲೆ ಸುಡಬೇಕು. ಅದು ಬೆಂಕಿಯಿಂದ ಮಾಡಿದ್ದಾಗಿದ್ದು, ಯೆಹೋವ ದೇವರಿಗೆ ಸುವಾಸನೆಯ ಸಮರ್ಪಣೆಯಾಗಿರುವುದು.