Leviticus 20:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಒಬ್ಬನು ತನ್ನ ಸೊಸೆಯೊಡನೆ ಲೈಂಗಿಕ ಸಂಬಂಧ ಬೆಳೆಸಿದರೆ, ಅವರಿಬ್ಬರೂ ಕೊಲ್ಲಲ್ಪಡಬೇಕು. ಅವರ ಮರಣಕ್ಕೆ ಅವರೇ ಜವಾಬ್ದಾರರಾಗಿದ್ದಾರೆ. ಅವರು ಬಹಳ ಕೆಟ್ಟದಾದ ಲೈಂಗಿಕ ಪಾಪವನ್ನು ಮಾಡಿದವರಾಗಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾವನಾದರೂ ಸೊಸೆಯನ್ನು ಸಂಗಮಿಸಿದರೆ ಅವರಿಬ್ಬರಿಗೂ ಮರಣಶಿಕ್ಷೆಯಾಗಬೇಕು; ಅವರು ಧರ್ಮವಿರುದ್ಧವಾದ ಕಾರ್ಯವನ್ನು ಮಾಡಿರುವುದರಿಂದ ಆ ಶಿಕ್ಷೆಗೆ ಅವರೇ ಕಾರಣರು.
Kannada BSI Bible 2016
ಒಬ್ಬನು ತನ್ನ ಸೊಸೆಯೊಂದಿಗೆ ಸಂಗಮಿಸಿದರೆ ಅವರಿಬ್ಬರಿಗೂ ನಿಶ್ಚಯವಾಗಿ ಮರಣದಂಡನೆ ವಿಧಿಸ ಬೇಕು; ಅವರು ಗಲಿಬಿಲಿಯನ್ನುಂಟುಮಾಡಿದ್ದಾರೆ; ಅವರ ರಕ್ತವು ಅವರ ಮೇಲೆ ಇರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾವನಾದರೂ ಸೊಸೆಯನ್ನು ಸಂಗವಿುಸಿದರೆ ಅವರಿಬ್ಬರಿಗೂ ಮರಣ ಶಿಕ್ಷೆಯಾಗಬೇಕು; ಅವರು ಧರ್ಮವಿರುದ್ಧವಾದ ಕಾರ್ಯವನ್ನು ಮಾಡಿದದರಿಂದ ಆ ಶಿಕ್ಷೆಗೆ ಅವರೇ ಕಾರಣರು.
Kannada Bible (KNCL) BSI 2016
ಯಾವನಾದರು ಸೊಸೆಯನ್ನು ಸಂಭೋಗಿಸಿದರೆ ಅವರಿಬ್ಬರಿಗೂ ಮರಣ ಶಿಕ್ಷೆಯಾಗಬೇಕು. ಅವರು ಅಧರ್ಮ ಕಾರ್ಯವನ್ನು ಮಾಡಿದ್ದರಿಂದ ಆ ಶಿಕ್ಷೆಗೆ ಅವರೇ ಕಾರಣರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಒಬ್ಬನು ತನ್ನ ಸೊಸೆಯೊಂದಿಗೆ ಸಂಗಮಿಸಿದರೆ, ಅವರಿಬ್ಬರಿಗೂ ನಿಶ್ಚಯವಾಗಿ ಮರಣದಂಡನೆ ವಿಧಿಸಬೇಕು. ಅವರು ವಿಕೃತವನ್ನು ಮಾಡಿದ್ದಾರೆ, ಅವರ ಪಾಪವು ಅವರ ಮೇಲೆ ಇರುವುದು.