Leviticus 20:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಒಬ್ಬನು ಒಬ್ಬ ಸ್ತ್ರೀಯೊಂದಿಗೂ ಅವಳ ತಾಯಿಯೊಂದಿಗೂ ಲೈಂಗಿಕ ಸಂಬಂಧಗಳನ್ನು ಬೆಳೆಸಿದರೆ, ಆಗ ಇದು ಲೈಂಗಿಕ ಪಾಪವಾಗಿದೆ. ಜನರು ಆ ಮನುಷ್ಯನನ್ನು ಇಬ್ಬರು ಸ್ತ್ರೀಯರನ್ನು ಬೆಂಕಿಯಿಂದ ಸುಟ್ಟುಹಾಕಬೇಕು. ನಿಮ್ಮ ಜನರ ಮಧ್ಯದಲ್ಲಿ ಈ ಲೈಂಗಿಕ ಪಾಪ ನಡೆಯಲು ಬಿಡಬೇಡಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾವನಾದರೂ ಒಬ್ಬ ಸ್ತ್ರೀಯನ್ನು ಹಾಗೂ ಅವಳ ತಾಯಿಯನ್ನು ಸಂಗಮಿಸಿದರೆ ಅದು ಅತಿದುಷ್ಟಕಾರ್ಯವಾದುದರಿಂದ ಆ ಮೂರು ಜನರನ್ನು ಬೆಂಕಿಯಿಂದ ಸುಡಿಸಿಬಿಡಬೇಕು; ಅಂತಹ ದುರಾಚಾರವು ನಿಮ್ಮಲ್ಲಿ ಎಷ್ಟು ಮಾತ್ರವೂ ನಡೆಯಬಾರದು.
Kannada BSI Bible 2016
ಒಬ್ಬ ಮನುಷ್ಯನು ತನಗೆ ಒಬ್ಬ ಹೆಂಡತಿಯನ್ನೂ ಅವಳ ತಾಯಿಯನ್ನೂ ತೆಗೆದುಕೊಂಡರೆ ಅದು ದುಷ್ಟತನವಾಗಿದೆ; ನಿಮ್ಮಲ್ಲಿ ದುಷ್ಟತನವು ಇರದಂತೆ ಅವನೂ ಅವರೂ ಬೆಂಕಿ ಯಿಂದ ಸುಡಲ್ಪಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾವನಾದರೂ ಒಬ್ಬ ಸ್ತ್ರೀಯನ್ನೂ ಅವಳ ತಾಯಿಯನ್ನೂ ಇಟ್ಟುಕೊಂಡರೆ ಅದು ಅತಿದುಷ್ಟಕಾರ್ಯವಾದದರಿಂದ ಆ ಮೂರು ಮಂದಿಯನ್ನೂ ಬೆಂಕಿಯಿಂದ ಸುಡಿಸಿಬಿಡಬೇಕು; ಅಂಥ ದುರಾಚಾರವು ನಿಮ್ಮಲ್ಲಿ ಎಷ್ಟುಮಾತ್ರವೂ ನಡೆಯಬಾರದು.
Kannada Bible (KNCL) BSI 2016
ಯಾವನಾದರೂ ಒಬ್ಬ ಸ್ತ್ರೀಯನ್ನೂ ಅವಳ ತಾಯಿಯನ್ನೂ ಇಟ್ಟುಕೊಂಡರೆ ಅದು ಅತಿದುಷ್ಟಕಾರ್ಯವಾದುದರಿಂದ ಆ ಮೂರು ಮಂದಿಯನ್ನೂ ಬೆಂಕಿಯಿಂದ ಸುಡಿಸಿಬಿಡಬೇಕು; ಅಂಥ ದುರಾಚಾರವು ನಿಮ್ಮಲ್ಲಿ ಎಷ್ಟುಮಾತ್ರವೂ ನಡೆಯಬಾರದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಒಬ್ಬ ಮನುಷ್ಯನು ಒಬ್ಬ ಸ್ತ್ರೀಯನ್ನೂ, ಅವಳ ತಾಯಿಯನ್ನೂ ಮದುವೆ ಮಾಡಿಕೊಂಡರೆ ಅದು ದುಷ್ಟತನವಾಗಿದೆ. ಆದ್ದರಿಂದ ನಿಮ್ಮಲ್ಲಿ ದುಷ್ಟತನವು ಇರದಂತೆ ಆ ಮೂರು ಜನರನ್ನು ಬೆಂಕಿಯಿಂದ ಸುಡಿಸಿಬಿಡಬೇಕು.