Leviticus 20:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಒಬ್ಬನು ಸ್ತ್ರೀಯನ್ನು ಅವಳ ತಿಂಗಳ ಮುಟ್ಟಿನ ಸಮಯದಲ್ಲಿ ಸಂಭೋಗ ಮಾಡಿದರೆ, ಅವರಿಬ್ಬರನ್ನೂ ಕುಲದಿಂದ ತೆಗೆದುಹಾಕಬೇಕು. ಯಾಕೆಂದರೆ ಅವನು ಅವಳ ಶೋಣಿತಸ್ಥಾನವನ್ನು ಬಯಲುಪಡಿಸಿದನು; ಅವಳು ಬಯಲುಪಡಿಸಿಕೊಂಡಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾವನಾದರೂ ಮುಟ್ಟಾದ ಸ್ತ್ರೀಯನ್ನು ಸಂಗಮಿಸಿದರೆ ಅವನು ಅವಳ ರಕ್ತಸ್ರಾವದ ಸ್ಥಾನವನ್ನು ಬಯಲುಪಡಿಸಿದವನು, ಅವಳು ಬಯಲುಪಡಿಸಿಕೊಂಡವಳು; ಆದುದರಿಂದ ಅವರಿಬ್ಬರನ್ನು ಕುಲದಿಂದ ಹೊರಗೆ ಹಾಕಬೇಕು.
Kannada BSI Bible 2016
ಒಬ್ಬನು ರೋಗದಲ್ಲಿರುವ ಒಬ್ಬ ಸ್ತ್ರೀಯೊಂದಿಗೆ ಮಲಗಿ ಅವಳ ಬೆತ್ತಲೆತನವನ್ನು ಕಾಣುವಂತೆ ಮಾಡಿದರೆ ಅವನು ಅವಳ ಬುಗ್ಗೆಯನ್ನು ಬಯಲುಪಡಿಸಿದ್ದಾನೆ; ಅವಳು ತನ್ನ ರಕ್ತದ ಬುಗ್ಗೆಯನ್ನು ಬಯಲುಪಡಿಸಿದ್ದಾಳೆ; ಆದದರಿಂದ ಅವರಿಬ್ಬರೂ ಅವರ ಜನರ ಮಧ್ಯದಿಂದ ತೆಗೆದುಹಾಕಲ್ಪಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾವನಾದರೂ ಮುಟ್ಟಾದ ಸ್ತ್ರೀಯನ್ನು ಸಂಗವಿುಸಿದರೆ ಅವನು ಅವಳ ಶೋಣಿತಸ್ಥಾನವನ್ನು ಬೈಲುಪಡಿಸಿದವನು. ಅವಳು ಬೈಲುಪಡಿಸಿಕೊಂಡವಳು; ಆದದರಿಂದ ಅವರಿಬ್ಬರೂ ಕುಲದಿಂದ ತೆಗೆದುಹಾಕಲ್ಪಡಬೇಕು.
Kannada Bible (KNCL) BSI 2016
ಯಾವನಾದರೂ ಮುಟ್ಟಾದ ಸ್ತ್ರೀಯನ್ನು ಸಂಗಮಿಸಿದರೆ ಅವನು ಅವಳ ಶೋಣಿತಸ್ಥಾನವನ್ನು ಬಯಲುಪಡಿಸಿದವನು, ಅವಳು ಬಯಲುಪಡಿಸಿಕೊಂಡವಳು; ಆದ್ದರಿಂದ ಅವರಿಬ್ಬರೂ ಕುಲದಿಂದ ತೆಗೆದುಹಾಕಲ್ಪಡಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಒಬ್ಬ ಮನುಷ್ಯನು ಮುಟ್ಟಾದ ಸ್ತ್ರೀಯೊಂದಿಗೆ ಮಲಗಿ, ಆಕೆಯೊಂದಿಗೆ ಲೈಂಗಿಕ ಸಂಪರ್ಕ ಮಾಡಿದರೆ, ಅವನು ಆಕೆಯ ಮುಟ್ಟಿನ ಮೂಲವನ್ನು ಬಹಿರಂಗಪಡಿಸಿದ್ದಾನೆ. ಆಕೆ ಅದನ್ನು ಬಹಿರಂಗಪಡಿಸಿದ್ದಾಳೆ. ಅವರಿಬ್ಬರನ್ನೂ ಸ್ವಜನರಿಂದ ಬಹಿಷ್ಕರಿಸಬೇಕು.