Leviticus 20:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ತಾಯಿಯ ಸಹೋದರಿ ಅಥವಾ ತಂದೆಯ ಸಹೋದರಿಯೊಂದಿಗೆ ಲೈಂಗಿಕ ಸಂಬಂಧ ಮಾಡಬಾರದು. ಅದು ರಕ್ತ ಸಂಬಂಧಿಯೊಡನೆ ಸಂಭೋಗ ಮಾಡಿದ ಪಾಪವಾಗಿದೆ. ನಿಮ್ಮ ಪಾಪಗಳಿಗಾಗಿ ನಿಮಗೆ ಶಿಕ್ಷೆಯಾಗಬೇಕು. (ಅದಕ್ಕೆ ನೀವಿಬ್ಬರೂ ಜವಾಬ್ದಾರರಾಗಿದ್ದೀರಿ.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತಂದೆಯ ಅಥವಾ ತಾಯಿಯ ಒಡಹುಟ್ಟಿದವಳ ಸಂಗಮ ಮಾಡಬಾರದು; ಹಾಗೆ ಮಾಡಿದವನು ರಕ್ತಸಂಬಂಧಿಯನ್ನು ಸಂಗಮಿಸಿದವನಾದುದರಿಂದ ಅವರಿಬ್ಬರೂ ತಮ್ಮ ಪಾಪದ ಫಲವನ್ನು ಅನುಭವಿಸಬೇಕು.
Kannada BSI Bible 2016
ಇದಲ್ಲದೆ ನೀನು ನಿನ್ನ ತಾಯಿಯ ಸಹೋದರಿಯ ಇಲ್ಲವೆ ತಂದೆಯ ಸಹೋದರಿಯ ಬೆತ್ತಲೆತನವನ್ನು ಕಾಣುವಂತೆ ಮಾಡ ಬಾರದು, ಕಾಣುವಂತೆ ಮಾಡಿದವನು ತನ್ನ ಹತ್ತಿರದ ಸಂಬಂಧಿಯ ಬೆತ್ತಲೆತನವನ್ನು ಬಯಲು ಮಾಡಿದ್ದಾನೆ; ಅವರು ತಮ್ಮ ಅಪರಾಧವನ್ನು ಹೊತ್ತುಕೊಳ್ಳಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ತಂದೆಯ ಅಥವಾ ತಾಯಿಯ ಒಡಹುಟ್ಟಿದವಳ ಸಂಗ ಮಾಡಬಾರದು; ಹಾಗೆ ಮಾಡಿದವನು ರಕ್ತಸಂಬಂಧಿಯನ್ನು ಸಂಗವಿುಸಿದವನಾದದರಿಂದ ಅವರಿಬ್ಬರೂ ತಮ್ಮ ಪಾಪದ ಫಲವನ್ನು ಅನುಭವಿಸಬೇಕು.
Kannada Bible (KNCL) BSI 2016
ತಂದೆಯ ಅಥವಾ ತಾಯಿಯ ಒಡಹುಟ್ಟಿದವಳ ಸಂಗಮಾಡಬಾರದು; ಹಾಗೆ ಮಾಡಿದವನು ರಕ್ತಸಂಬಂಧಿಯನ್ನು ಸಂಗಮಿಸಿದವನಾದುದರಿಂದ ಅವರಿಬ್ಬರೂ ತಮ್ಮ ಪಾಪದ ಫಲವನ್ನು ಅನುಭವಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ನೀನು ನಿನ್ನ ತಾಯಿಯ ಸಹೋದರಿ ಇಲ್ಲವೆ ತಂದೆಯ ಸಹೋದರಿಯೊಂದಿಗೆ ಲೈಂಗಿಕ ಸಂಪರ್ಕ ಮಾಡಬೇಡ. ಅದು ಸಮೀಪ ಬಂಧುವನ್ನು ಅಗೌರವಿಸಿದ ಹಾಗೆ ಅದಕ್ಕೆ ನೀವಿಬ್ಬರೂ ಜವಾಬ್ದಾರರು.