Leviticus 20:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ತನ್ನ ಸಹೋದರನ ಹೆಂಡತಿಯೊಡನೆ ಲೈಂಗಿಕ ಸಂಬಂಧ ಬೆಳೆಸುವುದು ತಪ್ಪಾಗಿದೆ. ಅವನು ತನ್ನ ಸಹೋದರನಿಗೆ ಅವಮಾನ ಮಾಡಿದವನಾಗಿದ್ದಾನೆ. ಅವರಿಗೆ ಮಕ್ಕಳಾಗುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾವನಾದರೂ ಅತ್ತಿಗೆ ಇಲ್ಲವೇ ನಾದಿನಿಯರನ್ನು ಸಂಗಮಿಸಿದರೆ ಅದು ಅಶುದ್ಧವಾದ ಕೆಲಸ; ಅವನು ಅಣ್ಣತಮ್ಮಂದಿರ ಮಾನವನ್ನೇ ಭಂಗಪಡಿಸಿದವನು; ಅವರಿಗೆ ಸಂತಾನವಿರುವುದಿಲ್ಲ.
Kannada BSI Bible 2016
ಇದಲ್ಲದೆ ಒಬ್ಬನು ತನ್ನ ಸಹೋದರನ ಹೆಂಡತಿಯನ್ನು ತೆಗೆದುಕೊಂಡರೆ ಅದು ಅಶುದ್ಧ ವಾದದ್ದು; ಅವನು ತನ್ನ ಸಹೋದರನ ಬೆತ್ತಲೆ ತನವನ್ನು ಕಾಣುವಂತೆ ಮಾಡಿದ್ದಾನೆ; ಅವರು ಮಕ್ಕಳಿ ಲ್ಲದವರಾಗುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾವನಾದರೂ ಅತ್ತಿಗೆನಾದಿನಿಯರನ್ನು ಇಟ್ಟುಕೊಂಡರೆ ಅದು ಅಶುದ್ಧವಾದ ಕೆಲಸ; ಅವನು ಅಣ್ಣತಮ್ಮಂದಿರ ಮಾನವನ್ನೇ ಭಂಗಪಡಿಸಿದವನು; ಅವರಿಗೆ ಸಂತಾನವಿರುವದಿಲ್ಲ.
Kannada Bible (KNCL) BSI 2016
ಯಾವನಾದರೂ ಅತ್ತಿಗೆ ನಾದಿನಿಯವರನ್ನು ಇಟ್ಟುಕೊಂಡರೆ ಅದು ಅಶುದ್ಧವಾದ ಕೆಲಸ; ಅವನು ಅಣ್ಣತಮ್ಮಂದಿರ ಮಾನವನ್ನೇ ಭಂಗಪಡಿಸಿದವನು. ಅವರಿಗೆ ಸಂತಾನವಿರುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಒಬ್ಬನು ತನ್ನ ಸಹೋದರನ ಹೆಂಡತಿಯನ್ನು ತೆಗೆದುಕೊಂಡರೆ, ಅದು ಅಶುದ್ಧವಾದದ್ದು. ಏಕೆಂದರೆ ಅವನು ತನ್ನ ಸಹೋದರನನ್ನು ಅಗೌರವಿಸಿದ್ದಾನೆ. ಅವರು ಮಕ್ಕಳಿಲ್ಲದವರಾಗುವರು.