Leviticus 20:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ದೇಶವನ್ನು ಬಿಟ್ಟುಹೋಗುವಂತೆ ಅಲ್ಲಿಯ ಜನರನ್ನು ನಾನು ಹೊರಡಿಸಿಬಿಡುತ್ತಿದ್ದೇನೆ. ಯಾಕೆಂದರೆ ಅವರು ಆ ಪಾಪಗಳನ್ನೆಲ್ಲಾ ಮಾಡಿದರು. ನಾನು ಆ ಪಾಪಗಳನ್ನು ದ್ವೇಷಿಸುತ್ತೇನೆ. ಆದ್ದರಿಂದ ಅವರು ಜೀವಿಸಿದಂತೆ ನೀವು ಜೀವಿಸಬೇಡಿರಿ!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ನಿಮಗಿಂತ ಮೊದಲು ಹೊರಡಿಸಿದ ಜನಾಂಗದ ಆಚಾರಗಳನ್ನು ನೀವು ಅನುಸರಿಸಬಾರದು; ಅವರು ಈ ದುರಾಚಾರಗಳನ್ನೆಲ್ಲಾ ನಡಿಸಿದ್ದರಿಂದ ನನಗೆ ಅಸಹ್ಯವಾದಾರು.
Kannada BSI Bible 2016
ನಾನು ನಿಮ್ಮೆದುರಿನಲ್ಲಿಯೇ ಹೊರಗೆ ಹಾಕಿದ ಜನಾಂಗಗಳಂತೆ ನೀವು ನಡೆಯಬಾರದು; ಅವರು ಇಂಥವುಗಳನ್ನೆಲ್ಲಾ ಮಾಡಿದ್ದಾರೆ; ಆದಕಾರಣ ನಾನು ಅವರನ್ನು ಅಸಹ್ಯಿಸಿಕೊಂಡಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನಿಮ್ಮ ಎದುರಿನಿಂದ ಹೊರಡಿಸುವ ಜನಾಂಗದ ಆಚಾರಗಳನ್ನು ನೀವು ಅನುಸರಿಸಬಾರದು; ಅವರು ಈ ದುರಾಚಾರಗಳನ್ನೆಲ್ಲಾ ನಡಿಸಿದದರಿಂದ ನನಗೆ ಹೇಸಿಗೆಯಾದರು.
Kannada Bible (KNCL) BSI 2016
ನಾನು ನಿಮ್ಮ ಎದುರಿನಿಂದ ಹೊರಡಿಸುವ ಜನಾಂಗದ ಆಚಾರಗಳನ್ನು ನೀವು ಅನುಸರಿಸಬಾರದು; ಅವರು ಈ ದುರಾಚಾರಗಳನ್ನೆಲ್ಲಾ ನಡಿಸಿದುದರಿಂದ ನನಗೆ ಹೇಸಿಗೆಯಾದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ನಿಮ್ಮೆದುರಿನಲ್ಲಿಯೇ ಹೊರಗೆ ಹಾಕಿದ ಜನಾಂಗಗಳಂತೆ ನೀವು ನಡೆಯಬಾರದು. ಏಕೆಂದರೆ ಅವರು ಇಂಥವುಗಳನ್ನೆಲ್ಲಾ ಮಾಡಿದ್ದಾರೆ. ಆದಕಾರಣ ನಾನು ಅವರನ್ನು ಕಂಡು ಅಸಹ್ಯಗೊಂಡಿದ್ದೇನೆ.