Leviticus 20:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನೀವು ಅವರ ದೇಶವನ್ನು ಪಡೆಯುವಿರಿ ಎಂದು ನಾನು ನಿಮಗೆ ಹೇಳಿದ್ದೇನೆ. ನಾನು ಅವರ ದೇಶವನ್ನು ನಿಮಗೆ ಕೊಡುವೆನು. ಅದು ನಿಮ್ಮ ದೇಶವಾಗಿರುವದು. ಅದು ಅನೇಕ ಒಳ್ಳೆ ಸಂಗತಿಗಳಿಂದ ತುಂಬಿದ ದೇಶವಾಗಿದೆ. ನಾನು ನಿಮ್ಮ ದೇವರಾಗಿರುವ ಯೆಹೋವನು! “ನಾನು ನಿಮ್ಮನ್ನು ನನ್ನ ವಿಶೇಷ ಜನರನ್ನಾಗಿ ಮಾಡಿಕೊಂಡಿದ್ದೇನೆ. ನಾನು ನಿಮ್ಮನ್ನು ಇತರ ಜನರಿಂದ ಆರಿಸಿಕೊಂಡಿದ್ದೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮಗಾದರೂ, ನೀವು ಅವರ ದೇಶವನ್ನು ಸ್ವಾಧೀನಪಡಿಸಿಕೊಳ್ಳುವಿರಿ, ಹಾಲೂ ಮತ್ತು ಜೇನೂ ಹರಿಯುವಂಥ ಆ ದೇಶವನ್ನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವೆನು ಎಂದು ನಾನು ಮಾತುಕೊಟ್ಟೆನಲ್ಲವೇ. ನಾನು ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿದ ನಿಮ್ಮ ದೇವರಾದ ಯೆಹೋವನು.
Kannada BSI Bible 2016
ನಾನು ನಿಮಗೆ ಹೇಳಿದ್ದೇನಂದರೆ--ನೀವು ಅವರ ದೇಶವನ್ನು ಸ್ವಾಧೀನ ಪಡಿಸಿಕೊಳ್ಳುವಿರಿ. ಹಾಲೂ ಜೇನೂ ಹರಿಯುವ ಆ ದೇಶವನ್ನು ನೀವು ಸ್ವಾಧೀನಪಡಿಸಿಕೊಳ್ಳುವಂತೆ ನಾನು ಅದನ್ನು ನಿಮಗೆ ಕೊಡುತ್ತೇನೆ. ನಿಮ್ಮನ್ನು ಬೇರೆ ಜನರಿಂದ ಪ್ರತ್ಯೇಕಪಡಿಸಿದಂಥ ನಿಮ್ಮ ದೇವರಾಗಿರುವ ಕರ್ತನು ನಾನೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮಗಾದರೋ - ನೀವು ಅವರ ದೇಶವನ್ನು ಸ್ವಾಧೀನಪಡಿಸಿಕೊಳ್ಳುವಿರಿ; ಹಾಲೂ ಜೇನೂ ಹರಿಯುವಂಥ ಆ ದೇಶವನ್ನು ನಿಮಗೆ ಸ್ವದೇಶವಾಗುವದಕ್ಕೆ ಕೊಡುವೆನು ಎಂದು ನಾನು ಮಾತುಕೊಟ್ಟೆನಲ್ಲವೇ. ನಾನು ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿದ ನಿಮ್ಮ ದೇವರಾದ ಯೆಹೋವನು.
Kannada Bible (KNCL) BSI 2016
ನಿಮಗಾದರೋ - ನೀವು ಅವರ ದೇಶವನ್ನು ಸ್ವಾಧೀನಪಡಿಸಿಕೊಳ್ಳುವಿರಿ; ಹಾಲೂ ಜೇನೂ ಹರಿಯುವಂಥ ಆ ದೇಶವನ್ನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವೆನು ಎಂದು ನಾನು ಮಾತುಕೊಟ್ಟೆನಲ್ಲವೇ? ನಾನು ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿದ ನಿಮ್ಮ ದೇವರಾದ ಸರ್ವೇಶ್ವರ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ, “ನೀವು ಅವರ ದೇಶವನ್ನು ಸ್ವಾಧೀನಪಡಿಸಿಕೊಳ್ಳುವಿರಿ. ಹಾಲೂ ಜೇನೂ ಹರಿಯುವ ಆ ದೇಶವನ್ನು ನೀವು ಸ್ವಾಧೀನಪಡಿಸಿಕೊಳ್ಳುವಂತೆ ನಾನು ಅದನ್ನು ನಿಮಗೆ ಕೊಡುತ್ತೇನೆ.” ನಿಮ್ಮನ್ನು ಬೇರೆ ಜನರಿಂದ ಪ್ರತ್ಯೇಕಪಡಿಸಿದಂಥ ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.