Leviticus 20:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸತ್ತವರಲ್ಲಿ ವಿಚಾರಿಸುವವರು ಅಥವಾ ಬೇತಾಳಿಕರು, ಪುರುಷರಾಗಲಿ ಸ್ತ್ರೀಯರಾಗಲಿ ಆಗಿದ್ದರೂ, ಅವರಿಗೆ ಮರಣಶಿಕ್ಷೆಯಾಗಬೇಕು. ಜನರು ಅವರನ್ನು ಕಲ್ಲೆಸೆದು ಕೊಲ್ಲಬೇಕು. ಅವರ ಮರಣಕ್ಕೆ ಅವರೇ ಜವಾಬ್ದಾರರಾಗಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ಸತ್ತವರಲ್ಲಿ ವಿಚಾರಿಸುವವರೂ, ಬೇತಾಳಿಕರೂ ಅವರು ಸ್ತ್ರೀಯರಾಗಲಿ ಅಥವಾ ಪುರುಷರಾಗಲಿ ಅವರು ಮರಣಶಿಕ್ಷೆ ಹೊಂದಬೇಕು. ಕಲ್ಲೆಸೆದು ಅವರನ್ನು ಕೊಲ್ಲಬೇಕು, ಆ ಶಿಕ್ಷೆಗೆ ಅವರೇ ಕಾರಣರು’” ಎಂದು ಹೇಳಿದನು.
Kannada BSI Bible 2016
ಮನುಷ್ಯನಾಗಲಿ ಸ್ತ್ರೀಯಾಗಲಿ ಮಂತ್ರವಾದಿ ಇಲ್ಲವೆ ಮಾಟಗಾರರಾಗಿರುವದಾಗಿದ್ದರೆ ಅವರನ್ನು ನಿಶ್ಚಯವಾಗಿ ಕಲ್ಲೆಸೆದು ಕೊಲ್ಲಬೇಕು; ಅವರ ರಕ್ತವು ಅವರ ಮೇಲೆ ಇರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸತ್ತವರಲ್ಲಿ ವಿಚಾರಿಸುವವರೂ ಬೇತಾಳಿಕರೂ ಸ್ತ್ರೀಯರಾಗಲಿ ಪುರುಷರಾಗಲಿ ಮರಣಶಿಕ್ಷೆ ಹೊಂದಬೇಕು. ಕಲ್ಲೆಸೆದು ಅವರನ್ನು ಕೊಲ್ಲಬೇಕು; ಆ ಶಿಕ್ಷೆಗೆ ಅವರೇ ಕಾರಣರು.
Kannada Bible (KNCL) BSI 2016
ಭೂತಪ್ರೇತಗಳನ್ನು ವಿಚಾರಿಸುವವರು ಸ್ತ್ರೀಯರಾಗಲಿ ಪುರುಷರಾಗಲಿ ಮರಣಶಿಕ್ಷೆ ಹೊಂದಬೇಕು. ಕಲ್ಲೆಸೆದು ಅವರನ್ನು ಕೊಲ್ಲಬೇಕು; ಆ ಶಿಕ್ಷೆಗೆ ಅವರೇ ಕಾರಣರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಪುರುಷನಾಗಲಿ, ಸ್ತ್ರೀಯಾಗಲಿ ಮಾಟಗಾರರಾಗಿದ್ದರೆ ಇಲ್ಲವೆ ಭೂತಪ್ರೇತಗಳನ್ನು ವಿಚಾರಿಸುವವರಾಗಿದ್ದರೆ, ಅವರನ್ನು ನಿಶ್ಚಯವಾಗಿ ಕೊಲ್ಲಬೇಕು. ಅವರ ಪಾಪವು ಅವರ ಮೇಲೆ ಇರುವುದು.’ ”
Recommended Reading