Leviticus 20:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಯಾವನಾದರೂ ತನ್ನ ತಂದೆಯನ್ನಾಗಲಿ ತಾಯಿಯನ್ನಾಗಲಿ ಶಪಿಸಿದರೆ, ಅವನಿಗೆ ಮರಣಶಿಕ್ಷೆಯಾಗಬೇಕು. ಅವನು ತನ್ನ ತಂದೆತಾಯಿಗಳನ್ನು ಶಪಿಸಿದನು. ಅವನ ಮರಣಕ್ಕೆ ಅವನೇ ಜವಾಬ್ದಾರನಾಗಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ತಂದೆಯನ್ನಾಗಲಿ ಅಥವಾ ತಾಯಿಯನ್ನಾಗಲಿ ದೂಷಿಸುವವನಿಗೆ ಮರಣಶಿಕ್ಷೆಯಾಗಬೇಕು. ತಂದೆತಾಯಿಗಳನ್ನು ದೂಷಿಸುವುದರಿಂದ ಅವನಿಗೆ ಸಂಭವಿಸಿದ ಮರಣಶಿಕ್ಷೆಗೆ ಅವನೇ ಕಾರಣನು.
Kannada BSI Bible 2016
ತನ್ನ ತಂದೆಯನ್ನಾಗಲಿ ತಾಯಿಯನ್ನಾಗಲಿ ಶಪಿಸುವ ವನಿಗೆ ನಿಶ್ಚಯವಾಗಿ ಮರಣದಂಡನೆ ವಿಧಿಸಬೇಕು; ಯಾವನು ತನ್ನ ತಂದೆಯನ್ನಾಗಲಿ ತಾಯಿಯನ್ನಾಗಲಿ ಶಪಿಸುವನೋ ಅವನ ರಕ್ತವು ಅವನ ಮೇಲೆಯೇ ಇರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ತಂದೆಯನ್ನಾಗಲಿ ತಾಯಿಯನ್ನಾಗಲಿ ದೂಷಿಸುವವನಿಗೆ ಮರಣಶಿಕ್ಷೆಯಾಗಬೇಕು. ತಂದೆತಾಯಿಗಳನ್ನು ದೂಷಿಸಿದದರಿಂದ ಅವನಿಗೆ ಸಂಭವಿಸಿದ ಮರಣಶಿಕ್ಷೆಗೆ ಅವನೇ ಕಾರಣನು.
Kannada Bible (KNCL) BSI 2016
“ತಂದೆಗಾಗಲಿ ತಾಯಿಗಾಗಲಿ ಶಾಪಹಾಕುವವರಿಗೆ ಮರಣಶಿಕ್ಷೆಯಾಗಬೇಕು. ತಂದೆತಾಯಿಗಳಿಗೆ ಶಾಪ ಹಾಕುವುದರಿಂದ ಅವರಿಗೆ ಸಂಭವಿಸುವ ಮರಣಶಿಕ್ಷೆಗೆ ಅವರೇ ಕಾರಣ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ತನ್ನ ತಂದೆಯಾನ್ನಾಗಲಿ, ತನ್ನ ತಾಯಿಯನ್ನಾಗಲಿ ಶಪಿಸುವವರಿಗೆ ನಿಶ್ಚಯವಾಗಿ ಮರಣದಂಡನೆ ವಿಧಿಸಬೇಕು. ಯಾರು ತನ್ನ ತಂದೆಯಾನ್ನಾಗಲಿ, ತನ್ನ ತಾಯಿಯನ್ನಾಗಲಿ ಶಪಿಸುವರೋ, ಅವರ ಪಾಪವು ಸ್ವಯಂಕೃತವಾದುದು.