Leviticus 21:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ಯಾಜಕರಾದ ಆರೋನನ ಮಕ್ಕಳಿಗೆ ಈ ಸಂಗತಿಗಳನ್ನು ಹೇಳು: ಯಾಜಕನು ಸತ್ತ ವ್ಯಕ್ತಿಯನ್ನು ಮುಟ್ಟಿ ತನ್ನನ್ನು ಅಶುದ್ಧಮಾಡಿಕೊಳ್ಳಬಾರದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಮೋಶೆಯೊಂದಿಗೆ ಮಾತನಾಡಿ, “ನೀನು ಆರೋನನ ಮಕ್ಕಳಾದ ಯಾಜಕರಿಗೆ ಹೀಗೆ ಆಜ್ಞಾಪಿಸಬೇಕು, ‘ಕುಲದಲ್ಲಿ ಸತ್ತವರಿಗೋಸ್ಕರ ಯಾವ ಯಾಜಕನೂ ತನ್ನನ್ನು ಅಪವಿತ್ರ ಮಾಡಿಕೊಳ್ಳಬಾರದು.
Kannada BSI Bible 2016
ತರುವಾಯ ಕರ್ತನು ಮೋಶೆಗೆ ಹೇಳಿದ್ದೇನಂದರೆ--ನೀನು ಆರೋನನ ಮಕ್ಕಳಾದ ಯಾಜಕರೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳು--ಸತ್ತವರ ನಿಮಿತ್ತವಾಗಿ ಅವನ ಜನರಲ್ಲಿ ಯಾವನೂ ಹೊಲೆಯಾಗಬಾರದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಮೋಶೆಗೆ ಹೇಳಿದ್ದೇನಂದರೆ - ನೀನು ಆರೋನನ ಮಕ್ಕಳಾದ ಯಾಜಕರಿಗೆ ಹೀಗೆ ಆಜ್ಞಾಪಿಸಬೇಕು - ಕುಲದಲ್ಲಿ ಸತ್ತವರಿಗೋಸ್ಕರ ಯಾವ ಯಾಜಕನೂ ತನ್ನನ್ನು ಅಪವಿತ್ರಮಾಡಿಕೊಳ್ಳಬಾರದು.
Kannada Bible (KNCL) BSI 2016
ಆರೋನನ ಮಕ್ಕಳಾದ ಯಾಜಕರಿಗೆ ಈ ಕೆಳಕಂಡಂತೆ ಆಜ್ಞಾಪಿಸಬೇಕೆಂದು ಸರ್ವೇಶ್ವರ ಸ್ವಾಮಿ ಮೋಶೆಗೆ ತಿಳಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಮೋಶೆಗೆ ಹೇಳಿದ್ದೇನೆಂದರೆ, “ನೀನು ಆರೋನನ ಮಕ್ಕಳಾದ ಯಾಜಕರೊಂದಿಗೆ ಮಾತನಾಡಿ, ಅವರಿಗೆ ಹೀಗೆ ಹೇಳು: ಸತ್ತವರ ದೇಹವನ್ನು ಮುಟ್ಟುವುದರಿಂದ ಯಾವ ಯಾಜಕನೂ ಅಪವಿತ್ರನಾಗಬಾರದು.