Leviticus 21:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಪ್ರಧಾನಯಾಜಕನು ಅವನ ಸಹೋದರರೊಳಗಿಂದ ಆರಿಸಲ್ಪಟ್ಟವನಾಗಿದ್ದಾನೆ. ಅಭಿಷೇಕತೈಲವು ಅವನ ತಲೆಯ ಮೇಲೆ ಹೊಯ್ಯಲ್ಪಟ್ಟಿದೆ. ಈ ರೀತಿಯಾಗಿ ಅವನು ಪ್ರಧಾನಯಾಜಕನ ವಿಶೇಷ ಕೆಲಸಕ್ಕೆ ಆರಿಸಲ್ಪಟ್ಟಿದ್ದಾನೆ. ಅವನು ವಿಶೇಷ ಬಟ್ಟೆಗಳನ್ನು ಧರಿಸಿಕೊಳ್ಳಲು ಆರಿಸಲ್ಪಟ್ಟಿದ್ದಾನೆ. ಆದ್ದರಿಂದ ಅವನು ಬಹಿರಂಗವಾಗಿ ದುಃಖ ಸೂಚಿಸುವ ಕಾರ್ಯಗಳನ್ನು ಮಾಡಬಾರದು. ಅವನು ತನ್ನ ಕೂದಲನ್ನು ಕೆದರಿಕೊಳ್ಳಬಾರದು. ಅವನು ತನ್ನ ಬಟ್ಟೆಗಳನ್ನು ಹರಿದುಕೊಳ್ಳಬಾರದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ಮಹಾಯಾಜಕನು ಅಂದರೆ ತನ್ನ ಸಹೋದರರಲ್ಲಿ ಪ್ರಧಾನನು, ಯಾವನು ತೈಲಾಭಿಷೇಕಹೊಂದಿ, ದೀಕ್ಷಾವಸ್ತ್ರಗಳನ್ನು ಧರಿಸಿ, ಪಟ್ಟಕ್ಕೆ ಬರುವನೋ ಅವನು ದುಃಖಸೂಚನೆಗಾಗಿ ತನ್ನ ತಲೆಯ ಕೂದಲನ್ನು ಕೆದರಿಕೊಳ್ಳಬಾರದು, ಬಟ್ಟೆಗಳನ್ನು ಹರಿದುಕೊಳ್ಳಬಾರದು.
Kannada BSI Bible 2016
ಅವನ ಸಹೋದರರೊಳಗೆ ಮಹಾಯಾಜಕ ನಾಗಿದ್ದು ಯಾವನ ತಲೆಯ ಮೇಲೆ ಅಭಿಷೇಕ ತೈಲವು ಸುರಿಯಲ್ಪಟ್ಟಿದೆಯೋ ಮತ್ತು ಯಾವನು ಉಡುಪು ಗಳನ್ನು ಧರಿಸಿಕೊಳ್ಳುವದಕ್ಕೆ ಪ್ರತಿಷ್ಠಿಸಲ್ಪಟ್ಟಿದ್ದಾನೋ ಅವನು ತನ್ನ ತಲೆಯನ್ನು ಮುಚ್ಚಿಕೊಳ್ಳಲೂಬಾರದು ಮತ್ತು ತನ್ನ ಬಟ್ಟೆಗಳನ್ನು ಹರಿದುಕೊಳ್ಳಲೂಬಾರದು;
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಜಕರಲ್ಲಿ ಪ್ರಧಾನನು ಅಂದರೆ ಯಾವನು ತೈಲಾಭಿಷೇಕಹೊಂದಿ ದೀಕ್ಷಾವಸ್ತ್ರಗಳನ್ನು ಧರಿಸಿ ಪಟ್ಟಕ್ಕೆ ಬರುವನೋ ಅವನು [ದುಃಖಸೂಚನೆಗಾಗಿ] ತನ್ನ ತಲೆಯ ಕೂದಲನ್ನು ಕೆದರಿಕೊಳ್ಳಬಾರದು; ಬಟ್ಟೆಗಳನ್ನು ಹರಿದುಕೊಳ್ಳಬಾರದು.
Kannada Bible (KNCL) BSI 2016
ಯಾಜಕರಲ್ಲಿ ಪ್ರಧಾನನು, ಅಂದರೆ ಯಾವನು ತೈಲಾಭಿಷೇಕ ಹೊಂದಿ ದೀಕ್ಷಾವಸ್ತ್ರಗಳನ್ನು ಧರಿಸಿ, ಪಟ್ಟಕ್ಕೆ ಬರುವನೋ ಅವನು ಸಂತಾಪ ಸೂಚನೆಗಾಗಿ ತನ್ನ ತಲೆಗೂದಲನ್ನು ಕೆದರಿಕೊಳ್ಳಬಾರದು; ಬಟ್ಟೆಗಳನ್ನು ಹರಿದುಕೊಳ್ಳಬಾರದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ತನ್ನ ಸಹೋದರರೊಳಗೆ ಮಹಾಯಾಜಕನಾಗಿದ್ದು, ಯಾವನು ತೈಲಾಭಿಷೇಕ ಹೊಂದಿ, ದೀಕ್ಷಾವಸ್ತ್ರಗಳನ್ನು ಧರಿಸಿ, ಪಟ್ಟಕ್ಕೆ ಬರುವನೋ, ಅವನು ತನ್ನ ತಲೆಯನ್ನು ಮುಚ್ಚಿಕೊಳ್ಳಲೂಬಾರದು, ತನ್ನ ಬಟ್ಟೆಗಳನ್ನು ಹರಿದುಕೊಳ್ಳಲೂಬಾರದು.