Leviticus 21:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪ್ರಧಾನಯಾಜಕನು ದೇವರ ಪರಿಶುದ್ಧ ಸ್ಥಳವನ್ನು ಬಿಟ್ಟು ಹೊರಗೆ ಹೋದರೆ ಅಶುದ್ಧನಾಗುವನು. ಅಲ್ಲದೆ ಅವನಿಂದ ದೇವರ ಪರಿಶುದ್ಧಸ್ಥಳವು ಅಶುದ್ಧವಾಗುವುದು. ಅಭಿಷೇಕತೈಲವು ಪ್ರಧಾನಯಾಜಕನ ತಲೆಯ ಮೇಲೆ ಹೊಯ್ಯಲ್ಪಟ್ಟಿದೆ. ಇದು ಅವನನ್ನು ಇತರ ಜನರಿಂದ ಪ್ರತ್ಯೇಕಗೊಳಿಸಿದೆ. ನಾನೇ ಯೆಹೋವನು!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಕ್ಕಾಗಿ ಅವನು ದೇವಸ್ಥಾನವನ್ನು ಬಿಡಲೇ ಬಾರದು; ಬಿಟ್ಟುಹೋದರೆ ತಾನು ಸೇವೆಮಾಡುವ ದೇವರ ಮಂದಿರದ ಗೌರವಕ್ಕೆ ಕುಂದು ಬರುವುದು. ತನ್ನ ದೇವರ ಅಭಿಷೇಕತೈಲವನ್ನು ತಲೆಯ ಮೇಲೆ ಹೊಯ್ಯಿಸಿಕೊಂಡು ಪ್ರತಿಷ್ಠಿತನಾಗಿದ್ದಾನಲ್ಲಾ, ನಾನು ಯೆಹೋವನು.
Kannada BSI Bible 2016
ಇದಲ್ಲದೆ ಪರಿಶುದ್ಧ ಸ್ಥಳದಿಂದ ಹೊರಗೆ ಹೋಗಬಾರದು ತನ್ನ ದೇವರ ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಬಾರದು; ತನ್ನ ದೇವರ ಅಭಿಷೇಕ ತೈಲದ ಕಿರೀಟವು ಅವನ ತಲೆಯ ಮೇಲೆ ಇರುತ್ತದೆ; ನಾನೇ ಕರ್ತನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಕ್ಕಾಗಿ ದೇವಸ್ಥಾನವನ್ನು ಬಿಡಲೇಬಾರದು; ಬಿಟ್ಟುಹೋದರೆ ತಾನು ಸೇವಿಸುವ ದೇವರ ಮಂದಿರದ ಗೌರವಕ್ಕೆ ಕುಂದುಬರುವದು. ತನ್ನ ದೇವರ ಅಭಿಷೇಕತೈಲವನ್ನು ತಲೆಯ ಮೇಲೆ ಹೊಯಿಸಿಕೊಂಡು ಪ್ರತಿಷ್ಠಿತನಾಗಿದ್ದಾನಲ್ಲಾ; ನಾನು ಯೆಹೋವನು.
Kannada Bible (KNCL) BSI 2016
ಇದಕ್ಕಾಗಿ ದೇವಸ್ಥಾನವನ್ನು ಬಿಡಲೇಬಾರದು; ಬಿಟ್ಟುಹೋದರೆ ತಾನು ಸೇವೆಮಾಡುವ ದೇವಮಂದಿರದ ಗೌರವಕ್ಕೆ ಕುಂದುಬರುವುದು. ಏಕೆಂದರೆ ತನ್ನ ದೇವರ ಅಭಿಷೇಕ ತೈಲವನ್ನು ತಲೆಯ ಮೇಲೆ ಹೊಯ್ಯಿಸಿಕೊಂಡು ಪ್ರತಿಷ್ಠಿತನಾಗಿದ್ದಾನೆ. ನಾನು ಸರ್ವೇಶ್ವರ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಪರಿಶುದ್ಧ ಸ್ಥಳದಿಂದ ಹೊರಗೆ ಹೋಗಬಾರದು ಮತ್ತು ತನ್ನ ದೇವರ ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಬಾರದು. ಏಕೆಂದರೆ ತನ್ನ ದೇವರ ಅಭಿಷೇಕ ತೈಲವನ್ನು ತಲೆಯ ಮೇಲೆ ಹೊಯ್ಯಿಸಿಕೊಂಡು ಪ್ರತಿಷ್ಠಿತನಾಗಿದ್ದಾನೆ. ನಾನೇ ಯೆಹೋವ ದೇವರು.