Leviticus 21:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪ್ರಧಾನಯಾಜಕನು ಬೇರೆ ಪುರುಷನೊಡನೆ ಲೈಂಗಿಕ ಸಂಬಂಧ ಮಾಡಿದ ಸ್ತ್ರೀಯನ್ನು ಮದುವೆಯಾಗಬಾರದು. ಪ್ರಧಾನಯಾಜಕನು ವೇಶ್ಯಾ ಸ್ತ್ರೀಯನ್ನಾಗಲಿ ಗಂಡ ಬಿಟ್ಟವಳನ್ನಾಗಲಿ ಅಥವಾ ವಿಧವೆಯನ್ನಾಗಲಿ ಮದುವೆಯಾಗಬಾರದು. ಪ್ರಧಾನಯಾಜಕನು ತನ್ನ ಸ್ವಂತ ಜನರಲ್ಲಿ ಒಬ್ಬ ಕನ್ಯೆಯನ್ನು ಮದುವೆಯಾಗಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ವಿಧವೆಯನ್ನಾಗಲಿ, ಗಂಡನಿಂದ ಬಿಡಲ್ಪಟ್ಟವಳನ್ನಾಗಲಿ, ಮಾನವನ್ನು ಭಂಗಪಡಿಸಿಕೊಂಡ ಸ್ತ್ರೀಯನ್ನಾಗಲಿ ಅಥವಾ ವೇಶ್ಯ ಸ್ತ್ರೀಯನ್ನಾಗಲಿ ಹೆಂಡತಿಯನ್ನಾಗಿ ಮಾಡಿಕೊಳ್ಳಬಾರದು. ಸ್ವದೇಶದವರಲ್ಲಿಯ ಕನ್ನಿಕೆಯನ್ನೇ ಮದುವೆ ಮಾಡಿಕೊಳ್ಳಬೇಕು.
Kannada BSI Bible 2016
ವಿಧವೆ ಯನ್ನಾಗಲಿ, ಬಿಡಲ್ಪಟ್ಟ ಸ್ತ್ರೀಯನ್ನಾಗಲಿ, ಅಪವಿತ್ರ ಳನ್ನಾಗಲಿ, ಇಲ್ಲವೆ ಸೂಳೆಯನ್ನಾಗಲಿ, ಇಂಥವರನ್ನು ಅವನು ತೆಗೆದುಕೊಳ್ಳಬಾರದು. ಆದರೆ ತನ್ನ ಸ್ವಂತ ಜನರಲ್ಲಿ ಒಬ್ಬ ಕನ್ನಿಕೆಯನ್ನು ತನಗೆ ಹೆಂಡತಿಯನ್ನಾಗಿ ತೆಗೆದುಕೊಳ್ಳಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ವಿಧವೆಯನ್ನಾಗಲಿ ಗಂಡನಿಂದ ಬಿಡಲ್ಪಟ್ಟವಳನ್ನಾಗಲಿ ಮಾನವನ್ನು ಭಂಗಪಡಿಸಿಕೊಂಡವಳನ್ನಾಗಲಿ ವೇಶ್ಯಾಸ್ತ್ರೀಯನ್ನಾಗಲಿ ಹೆಂಡತಿಯನ್ನಾಗಿ ಮಾಡಿಕೊಳ್ಳಬಾರದು. ಸ್ವದೇಶದವರಲ್ಲಿಯೇ ಹೆಣ್ಣನ್ನು ಪರಿಗ್ರಹಿಸಬೇಕು;
Kannada Bible (KNCL) BSI 2016
ವಿಧವೆಯನ್ನಾಗಲಿ, ಗಂಡನಿಂದ ಬಿಡಲ್ಪಟ್ಟವಳನ್ನಾಗಲಿ, ಶೀಲಭ್ರಷ್ಟ ಸ್ತ್ರೀಯನ್ನಾಗಲಿ, ವೇಶ್ಯೆಯನ್ನಾಗಲಿ ಮದುವೆ ಮಾಡಿಕೊಳ್ಳಬಾರದು. ಸ್ವದೇಶದವರಲ್ಲಿಯೇ ಹೆಣ್ಣನ್ನು ಪರಿಗ್ರಹಿಸಬೇಕು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ವಿಧವೆಯನ್ನಾಗಲಿ, ಗಂಡ ಬಿಟ್ಟ ಸ್ತ್ರೀಯನ್ನಾಗಲಿ, ಇಲ್ಲವೆ ಅಪವಿತ್ರಳನ್ನಾಗಲಿ, ವೇಶ್ಯೆಯನ್ನಾಗಲಿ, ಇಂಥವರನ್ನು ಅವನು ಮದುವೆಯಾಗಬಾರದು. ಆದರೆ ತನ್ನ ಸ್ವಂತ ಜನರಲ್ಲಿ ಒಬ್ಬ ಕನ್ನಿಕೆಯನ್ನು ತನಗೆ ಹೆಂಡತಿಯನ್ನಾಗಿ ಮಾಡಿಕೊಳ್ಳಬೇಕು.