Leviticus 21:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೀಗಾಗಿ ಜನರು ಅವನ ಮಕ್ಕಳಿಗೆ ಗೌರವ ತೋರಿಸುವರು. ಯೆಹೋವನಾಗಿರುವ ನಾನು ಪ್ರಧಾನಯಾಜಕನನ್ನು ಅವನ ವಿಶೇಷ ಕೆಲಸಕ್ಕಾಗಿ ಪ್ರತ್ಯೇಕಿಸಿದ್ದೇನೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಲ್ಲವಾದರೆ ಅವನ ಸಂತತಿಯ ಸ್ವಜನರೊಳಗೆ ಅವನು ಅಪವಾದಕ್ಕೆ ಗುರಿಯಾಗುವನು. ಅವನನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು ನಾನು’” ಎಂದು ಹೇಳಿದನು.
Kannada BSI Bible 2016
ಇದಲ್ಲದೆ ಅವನು ತನ್ನ ಜನರೊಳಗೆ ತನ್ನ ಸಂತತಿಯನ್ನು ಅಪವಿತ್ರ ಮಾಡಬಾರದು. ಕರ್ತನಾದ ನಾನು ಅವನನ್ನು ಶುದ್ಧೀಕರಿಸುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಲ್ಲವಾದರೆ ಅವನ ಸಂತತಿಯು ಸ್ವಜನರೊಳಗೆ ಅಪವಾದಕ್ಕೆ ಗುರಿಯಾದೀತು. ಅವನನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು ನಾನು.
Kannada Bible (KNCL) BSI 2016
ಇಲ್ಲವಾದರೆ ಅವನ ಸಂತತಿ ಸ್ವಜನರೊಳಗೆ ಅಪವಾದಕ್ಕೆ ಗುರಿಯಾಗುವುದು. ಅವನನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಸರ್ವೇಶ್ವರ ನಾನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಅವನು ತನ್ನ ಜನರೊಳಗೆ ತನ್ನ ಸಂತತಿಯನ್ನು ಅಪವಿತ್ರ ಮಾಡಬಾರದು. ಏಕೆಂದರೆ ಯೆಹೋವ ದೇವರಾದ ನಾನು ಅವನನ್ನು ಶುದ್ಧೀಕರಿಸುತ್ತೇನೆ.’ ”