Leviticus 21:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಅವನು ತೆರೆಯ ಬಳಿಗೆ ಹೋಗಬಾರದು; ಅವನು ಯಜ್ಞವೇದಿಕೆಯ ಬಳಿಗೆ ಹೋಗಬಾರದು. ಯಾಕೆಂದರೆ ಅವನು ಅಂಗವಿಕಲನಾಗಿದ್ದಾನೆ. ಅವನು ನನ್ನ ಪರಿಶುದ್ಧ ಸ್ಥಳಗಳನ್ನು ಅಶುದ್ಧಗೊಳಿಸಬಾರದು. ಯೆಹೋವನಾದ ನಾನೇ ಆ ಸ್ಥಳಗಳನ್ನು ಪರಿಶುದ್ಧಗೊಳಿಸಿದ್ದೇನೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನಿಗೆ ಕಳಂಕವಿರುವುದರಿಂದ ತೆರೆಯನ್ನು ದಾಟಿ ಒಳಗೆ ಬರಬಾರದು; ಯಜ್ಞವೇದಿಯ ಬಳಿಗೆ ಬರಬಾರದು; ನನ್ನ ಪವಿತ್ರಸ್ಥಾನಗಳ ಗೌರವಕ್ಕೆ ಅವನಿಂದ ಕುಂದು ಉಂಟಾಗಬಾರದು; ಆ ಸ್ಥಾನಗಳನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು ನಾನು’” ಎಂದು ಹೇಳಿದನು.
Kannada BSI Bible 2016
ಆದರೆ ಅವನು ಕಳಂಕವುಳ್ಳವನಾದದರಿಂದ ತೆರೆಯ ಒಳಕ್ಕೆ ಹೋಗ ಬಾರದು ಇಲ್ಲವೆ ಯಜ್ಞವೇದಿಯ ಸವಿಾಪಕ್ಕೂ ಬರಬಾರದು. ಹೀಗೆ ಅವನು ನನ್ನ ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಬಾರದು; ಅವರನ್ನು ಶುದ್ಧೀಕರಿಸುವ ಕರ್ತನು ನಾನೇ.ಮೋಶೆಯು ಅದನ್ನು ಆರೋನ ನಿಗೂ ಅವನ ಕುಮಾರರಿಗೂ ಇಸ್ರಾಯೇಲ್ ಎಲ್ಲಾ ಮಕ್ಕಳಿಗೂ ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನಿಗೆ ಕಳಂಕವಿರುವದರಿಂದ ತೆರೆಯನ್ನು ದಾಟಿ ಒಳಗೆ ಬರಬಾರದು; ಯಜ್ಞವೇದಿಯ ಬಳಿಗೆ ಬರಬಾರದು; ನನ್ನ ಪವಿತ್ರಸ್ಥಾನಗಳ ಗೌರವಕ್ಕೆ ಅವನಿಂದ ಕುಂದು ಉಂಟಾಗಬಾರದು; ಆ ಸ್ಥಾನಗಳನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು ನಾನು.
Kannada Bible (KNCL) BSI 2016
ಆದರೆ ಅವನಿಗೆ ಕಳಂಕವಿರುವುದರಿಂದ ತೆರೆಯನ್ನು ದಾಟಿ ಒಳಗೆ ಬರಬಾರದು; ಬಲಿಪೀಠದ ಬಳಿಗೆ ಬರಬಾರದು; ನನ್ನ ಪವಿತ್ರಸ್ಥಾನಗಳ ಗೌರವಕ್ಕೆ ಅವನಿಂದ ಕುಂದು ಉಂಟಾಗಬಾರದು; ಆ ಸ್ಥಾನಗಳನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಸರ್ವೇಶ್ವರ ನಾನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅವನು ನ್ಯೂನತೆವುಳ್ಳವನಾದ್ದರಿಂದ ತೆರೆಯ ಒಳಗೆ ಹೋಗಬಾರದು ಹಾಗು ಯಜ್ಞವೇದಿಯ ಬಳಿಗೆ ಬರಬಾರದು. ಹೀಗೆ ಅವನು ನನ್ನ ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಬಾರದು. ಏಕೆಂದರೆ ಅವರನ್ನು ಶುದ್ಧೀಕರಿಸುವ ಯೆಹೋವ ದೇವರು ನಾನೇ.’ ”