Leviticus 21:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಯಾಜಕನು ವಿಶೇಷವಾದ ರೀತಿಯಲ್ಲಿ ದೇವರ ಸೇವೆ ಮಾಡುತ್ತಾನೆ. ಆದ್ದರಿಂದ ಯಾಜಕನು ಬೇರೆಯವರೊಡನೆ ಲೈಂಗಿಕ ಸಂಬಂಧಮಾಡಿದ ಸ್ತ್ರೀಯನ್ನು ಮದುವೆಯಾಗಬಾರದು. ಯಾಜಕನು ವೇಶ್ಯೆಯನ್ನಾಗಲಿ ಗಂಡ ಬಿಟ್ಟವಳನ್ನಾಗಲಿ ಮದುವೆಯಾಗಬಾರದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಜಕರು ತಮ್ಮ ದೇವರಿಗೆ ಮೀಸಲಾದವರು ಆಗಿರುವುದರಿಂದ ವೇಶ್ಯ ಸ್ತ್ರೀಯನ್ನಾಗಲಿ, ಮಾನವನ್ನು ಭಂಗಪಡಿಸಿಕೊಂಡ ಸ್ತ್ರೀಯನ್ನಾಗಲಿ ಅಥವಾ ಗಂಡನಿಂದ ಬಿಡಲ್ಪಟ್ಟವಳನ್ನಾಗಲಿ ಹೆಂಡತಿಯನ್ನಾಗಿ ತೆಗೆದುಕೊಳ್ಳಬಾರದು.
Kannada BSI Bible 2016
ಅವರು ವ್ಯಭಿಚಾರಿಯನ್ನು ಇಲ್ಲವೆ ಅಪವಿತ್ರಳನ್ನು ಹೆಂಡತಿಯಾಗಿ ತೆಗೆದುಕೊಳ್ಳಬಾರದು; ಇಲ್ಲವೆ ಗಂಡನಿಂದ ಬಿಡಲ್ಪಟ್ಟ ಸ್ತ್ರೀಯನ್ನು ತೆಗೆದು ಕೊಳ್ಳಬಾರದು; ಅವನು ತನ್ನ ದೇವರಿಗೆ ಪರಿಶುದ್ಧ ನಾಗಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಜಕರು ತಮ್ಮ ದೇವರಿಗೆ ಮೀಸಲಾದವರಾಗಿರುವದರಿಂದ ವೇಶ್ಯಾ ಸ್ತ್ರೀಯನ್ನಾಗಲಿ ಮಾನವನ್ನು ಭಂಗಪಡಿಸಿಕೊಂಡ ಸ್ತ್ರೀಯನ್ನಾಗಲಿ ಗಂಡನಿಂದ ಬಿಡಲ್ಪಟ್ಟವಳನ್ನಾಗಲಿ ಹೆಂಡತಿಯನ್ನಾಗಿ ತೆಗೆದುಕೊಳ್ಳಬಾರದು.
Kannada Bible (KNCL) BSI 2016
ಯಾಜಕರು ತಮ್ಮ ದೇವರಿಗೆ ಮೀಸಲಾಗಿರುವುದರಿಂದ ವೇಶ್ಯೆಯನ್ನಾಗಲಿ, ಶೀಲಭ್ರಷ್ಟ ಸ್ತ್ರೀಯನ್ನಾಗಲಿ, ಗಂಡನಿಂದ ಬಿಡಲ್ಪಟ್ಟವಳನ್ನಾಗಲಿ ಹೆಂಡತಿಯನ್ನಾಗಿ ತೆಗೆದುಕೊಳ್ಳಬಾರದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಯಾಜಕರು ತಮ್ಮ ದೇವರಿಗೆ ಪರಿಶುದ್ಧರಾಗಿರುವುದರಿಂದ ವೇಶ್ಯೆಯನ್ನಾಗಲಿ, ಶೀಲಭ್ರಷ್ಠ ಸ್ತ್ರೀಯನ್ನಾಗಲಿ, ಗಂಡನಿಂದ ವಿಚ್ಛೇದನ ಪಡೆದವಳನ್ನಾಗಲಿ ಹೆಂಡತಿಯನ್ನಾಗಿ ತೆಗೆದುಕೊಳ್ಳಬಾರದು.